in ,

ಮಲ್ಲಾಡಿಹಳ್ಳಿಯಲ್ಲಿ ಪ್ರಥಮ ವಸತಿಯುಕ್ತ ಸರ್ಕಾರಿ ಪದವಿ ಕಾಲೇಜು ಪ್ರಾರಂಭ

suddione whatsapp group join

ಚಿತ್ರದುರ್ಗ, (ಸೆಪ್ಟೆಂಬರ್. 22) : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಜಿಲ್ಲೆಯ ಪ್ರಪ್ರಥಮ ವಸತಿಯುಕ್ತ ಸರ್ಕಾರಿ ಪದವಿ ಕಾಲೇಜು ಪ್ರಾರಂಭವಾಗಿದೆ.

ಮಲ್ಲಾಡಿಹಳ್ಳಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಗಾಗಲೇ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ಈ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಪದವಿ ತರಗತಿಗಳ ವ್ಯಾಸಂಗದ ಅವಧಿಯಲ್ಲಿ ಸರ್ಕಾರದಿಂದ ಉಚಿತವಾಗಿ ವಸತಿ, ಊಟ, ಶಿಕ್ಷಣ ಸೌಲಭ್ಯ ದೊರೆಯಲಿದೆ.

ರಾಜ್ಯದಲ್ಲಿ ಹಿಂದುಳಿದ 10 ಜಿಲ್ಲೆಗಳಿಗೆ ಮಾತ್ರ ತಲಾ ಒಂದರಂತೆ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಸುಮಾರು 10 ಎಕರೆ ಜಾಗದಲ್ಲಿ ರೂ.25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿರುತ್ತವೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾದ ವಸತಿ ಗೃಹಗಳು, ಊಟದ ಕೋಣೆಗಳು, ಆಟದ ಮೈದಾನ, ಆಡಿಟೋರಿಯಂ, ಗ್ರಂಥಾಲಯ ಸೌಲಭ್ಯ, ತರಗತಿ ಕೊಠಡಿಗಳು ಸೇರಿದಂತರೆ ಮುಂತಾದ ಸೌಕರ್ಯಗಳು ಲಭ್ಯವಾಗಲಿವೆ.

2021-2022ನೇ ಸಾಲಿನ ಪ್ರಸಕ್ತ ಶೈಕ್ಷಣಿಕ ವóರ್ಷದಿಂದ ದಾವಣಗೆರೆ ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟು ಬಿ.ಎ, ಬಿ.ಕಾಂ, ಬಿ.ಎಸ್ಸಿ ಪದವಿ ತರಗತಿಗಳಲ್ಲಿ ಪ್ರವೇಶ ಪ್ರಾರಂಭಿಸಲಾಗಿದೆ. ಸರ್ಕಾರದ ನಿಯಮಾನುಸಾರ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ  ಪ್ರವೇಶ ಲಭ್ಯವಿರುತ್ತದೆ.

ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದು, ಪ್ರವೇಶ ಪಡೆಯಬಹುದಾಗಿದೆ.  ಪ್ರಸಕ್ತ ಸಾಲಿನಲ್ಲಿ ಬಿ.ಕಾಂ (ದಾವಣಗೆರೆ ವಿಶ್ವವಿದ್ಯಾನಿಲಯ ನಿಗದಿ ಪಡಿಸಿದ ವಿಷಯಗಳು), ಬಿ.ಎ (ಇತಿಹಾಸ, ಅರ್ಥಶಾಸ್ರ್ತ, ರಾಜ್ಯಶಾಸ್ರ್ತ-ಹೆಚ್.ಇ.ಪಿ) ಮತ್ತು ಬಿ.ಎಸ್ಸಿ (ಭೌತಶಾಸ್ತ್ರ, ಗಣಿತ ಶಾಸ್ತ್ರ, ಗಣಕ ಶಾಸ್ತ್ರ- ಪಿ.ಎಂ.ಸಿಎಸ್) ಕೋರ್ಸ್‍ಗಳಲ್ಲಿ ಪ್ರವೇಶಾತಿ ಪ್ರಾರಂಭಿಸಲಾಗಿದೆ. ಪ್ರತಿಯೊಂದು ಕೋರ್ಸ್‍ಗೂ ತಲಾ 40 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುವುದು. ಇದೇ ಅಕ್ಟೋಬರ್ 30 ಪ್ರವೇಶ ಪಡೆಯಲು ಅಂತಿಮ ದಿನ.
ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮತ್ತು ಪೋಷಕರು ಕೂಡಲೇ ಹೆಚ್ಚಿನ ಮಾಹಿತಿಗಾಗಿ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಪಿ.ರವಿ ಅವರ ದೂರವಾಣಿ ಸಂಖ್ಯೆ 9448617633, 9731159466ಗೆ ಸಂಪರ್ಕಿಸಬಹುದು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪನ

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ..ಗ್ಯಾಸ್ ಬ್ಲಾಸ್ಟ್ ಅಲ್ಲ ಮತ್ತಿನೇನು..?