ನವದೆಹಲಿ: ಸದ್ಯ ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿ ನಾಯಕರ ಹೆಸರು ತಗಲಾಕಿಕೊಂಡಿದೆ. ಇದೇ ಅಸ್ತ್ರವನ್ನ ಕಾಂಗ್ರೆಸ್ ದಾಳವಾಗಿ ಬಳಸಿಕೊಂಡು ತಿರುಗೇಟು ನೀಡ್ತಾನೆ ಇದೆ. ಈ ಬೆನ್ನಲ್ಲೇ ಸಿಎಂ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿ, ಬಿಟ್ ಕಾಯಿನ್ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ.
ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಉಪಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯನ್ನ ಭೇಟಿಯಾಗಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಪ್ರಧಾನಿ ಭೇಟಿಯಲ್ಲಿ ಹಲವಾರು ವಿಚಾರಗಳ ಚರ್ಚೆ ನಡೆಸಿದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿ ಬಿಜೆಪಿ ನಾಯಕರ ಹೆಸರು ಕೇಳಿ ಬಂದ ಹಿನ್ನೆಲೆ ಆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇನ್ನು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಆ ಬಳಿಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತೇನೆ. ಬಿಟ್ ಕಾಯಿನ್ ನಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೂಡ ಇದೆ. ಅದನ್ನ ಯೋಚನೆ ಮಾಡಲಿ ಎಂದು ಇದೇ ವೇಳೆ ಪ್ರಿಯಾಂಕ ಖರ್ಗೆ ನೀಡಿದ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.