ನವದೆಹಲಿ: ತಿಹಾರ್ ಜೈಲಿನಲ್ಲಿ ಸಾವನ್ನಪ್ಪುತ್ತಿರುವ ಕೈದಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಎಂಟು ದಿನದಲ್ಲೇ ಐವರು ಕೈದಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬಗ್ಗೆ ಮೇಲಾಧಿಕಾರಿಗಳು ತನಿಖೆಗೆ ಆದೇಶ ನೀಡಿದ್ದಾರೆ.
ಜೈಲಿನ ಸಂಖ್ಯೆ 3ರಲ್ಲಿರುವ ಕೈದಿ ಕೂಡ ಶುಕ್ರವಾರ ಸಾವನ್ನಪ್ಪಿದ್ದಾನೆ. ಆತ ತನ್ನ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನಂತೆ. ತಕ್ಷಣ ಆತನನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಆತ ಬದುಕುಳಿದಿಲ್ಲ. ವಿಕ್ರಮ್ ಅಲಿಯಾಸ್ ವಿಕ್ಕಿ ಸಾವನ್ನಪ್ಪಿದ ಕೈದಿಯಾಗಿದ್ದಾನೆ. ವೈದ್ಯರು ಪರೀಕ್ಷಿಸಿದಾಗ ಆತ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ ಎಂದಿದ್ದಾರೆ.
ಎಲ್ಲರ ಸಾವು ಸಹಜ ಸಾವಿನ ರೀತಿಯೇ ಕಂಡರೂ ಅಲ್ಲಿನ ಅಧಿಕಾರಿಗಳು ತನಿಖೆಗೆ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಗೋಯೆಲ್, ಕೈದಿಗಳ ಮೇಲೆ ಯಾವುದೇ ಹಲ್ಲೆಗಳನ್ನು ಮಾಡಲಾಗಿಲ್ಲ. ಅವರಿಗೆ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಾಗಿದೆ. ಅವರಿಗೆ ಅನಾರೋಗ್ಯ ಇದ್ದ ಕಾರಣ ಸಾವನ್ನಪ್ಪಿದ್ದಾರೆ. ವೈದ್ಯರು ಕೂಡ ಅದನ್ನ ಪ್ರೂವ್ ಮಾಡಿದ್ದಾರೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…