Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ಐವರು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮಾ. 10 : ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದವತಿಯಿಂದ ಇತ್ತೀಚೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಐದು ಜನ ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನವನ್ನು ಮಾಡಲಾಯಿತು.

 

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಎ.ಮುರಳಿ ಇತ್ತಿಚಿನ ದಿನದಲ್ಲಿ ಮಹಿಳೆಯರು ಎಲ್ಲದರಲ್ಲೂ ಸಹಾ ಸಾಧನೆಯನ್ನು ಮಾಡುತ್ತಿದ್ದಾರೆ. ಪುರುಷರಂತೆ ಅವರು ಸಹಾ ಸರಿಸಮನಾದ ರೀತಿಯಲ್ಲಿ ಬದುಕುತ್ತಿದ್ದಾರೆ. ಎಲ್ಲಾ ಕೆಲಸಗಳಲ್ಲಿಯೂ ಸಹಾ ಮಹಿಳೆಯರು ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಮನೆ ಕೆಲಸದಿಂದ ಹಿಡಿದು ಕಚೇರಿಯ ಕೆಲಸದಲ್ಲಿಯೂ ಸಹಾ ಮಹಿಳೆಯರು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಿದ್ದಾರೆ. ಇಂತಹ ಮಹಿಳೆಯನ್ನು ನಾವುಗಳು ಗೌರವಿಸಬೇಕಿದೆ. ಇಂದಿನ ದಿನಮಾನದಲ್ಲಿ ಮಹಿಳೆ ಇಲ್ಲದ ಮನೆ ಇಲ್ಲ ಕಚೇರಿಯೂ ಇಲ್ಲ ಎನ್ನುವಂತಾಗಿದೆ ಎಂದರು.

 

ಪೌರ ಕಾರ್ಮಿಕರು ನಮಗಾಗಿ ಪ್ರತಿ ದಿನ ನಗರವನ್ನು ಶುಚಿಗೂಳಿಸುವ ಕಾರ್ಯವನ್ನು ಮುಂಜಾನೆಯಿಂದಲೇ ಮಾಡುತ್ತಾರೆ. ಇದರಲ್ಲಿ ಪುರುಷರಷ್ಟೇ ಸಮಾನವಾಗಿ ಮಹಿಳೆಯರು ಸಹಾ ಕೆಲಸವನ್ನು ಮಾಡುತ್ತಾರೆ, ಇದರಲ್ಲಿ ಕಸಗೂಡಿಸುವುದು, ಕಸವನ್ನು ತೆಗೆದುಕೊಂಡು ಹೋಗುವುದು, ಬೀದಿಯನ್ನು ಸ್ವಚ್ಚವಾಗಿ ಇಡುವುದು ಸೇರಿದಂತೆ ಇತರೆ ಕೆಲಸವನ್ನು ಮಾಡುತ್ತಾರೆ ಇವರ ಕೆಲಸವನ್ನು ಬೇರೆಯವರು ಮಾಡುವುದಿಲ್ಲ ಇವರೇ ಮಾಡುತ್ತಾರೆ ಇಂತಹರಿಗೆ ನಾವು ಗೌರವವನ್ನು ನೀಡಬೇಕಿದೆ ಅವರ ಕಾರ್ಯವನ್ನು ಶ್ಲಾಘಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್. ಸುರೇಶ್ ಸಿದ್ದಾಪುರ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಮ್ಮ, ಜಗದಾಂಬ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬಸಮ್ಮ, ಕವನ, ಸಿಂಧೂ, ರೂಪ ರುದ್ರಮ್ಮ, ಶಾರದಮ್ಮ, ವೀಣಾ, ಕಾಂಚನ, ಚಂದ್ರಿಕಾ ಗೀತಾ, ಮಂಜುಳಮ್ಮ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment