Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿ.ಯು, ಪದವಿ ಹಂತದ 5 ವರ್ಷದ ಪರಿಶ್ರಮ ಮುಂದಿನ 50 ವರ್ಷಗಳ ಭವಿಷ್ಯಕ್ಕೆ ಬುನಾದಿ: ಶ್ರೀ ಬಸವಪ್ರಭು ಸ್ವಾಮೀಜಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 18 : ಯಾವುದೇ ಒಬ್ಬ ವ್ಯಕ್ತಿಯ ಯಶಸ್ಸಿಗೆ ಹಿಂದೆ ಗುರು ಮುಂದೆ ಗುರಿ ಇದ್ದಾಗ ಆತ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ. ಇವೆರಡು ಇಲ್ಲದಿದ್ದಾಗ ಜೀವನದಲ್ಲಿ ಸಾಧನೆಯನ್ನು ಮಾಡಲು ಸಾಧ್ಯವಿಲ್ಲ ಎಂದು ದಾವಣಗೆರೆಯ ವಿರಕ್ತಮಠ ಹಾಗೂ ಚಿತ್ರದುರ್ಗದ ಶ್ರೀ ಮುರುಘಾ ಮಠದ ಡಾ. ಶ್ರೀ ಬಸವಪ್ರಭು ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಸ್.ಜೆ.ಎಂ. ವಿದ್ಯಾಪೀಠ(ರಿ) ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಗಾರೆಹಟ್ಟಿ ರಸ್ತೆಯ ಮಹಾಬಲೇಶ್ವರ ದೇವಸ್ಥಾನದ ಆವರಣದ ಶ್ರೀ ಬೃಹನ್ಮಠ ಸಂಯುಕ್ತ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ 2026-27ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ (ಕ್ರೀಡಾ ಹಾಗೂ ಇತರೆ ಚಟುವಟಿಕೆಗಳು)ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಶ್ರೀಗಳು, ಗುರು ಮತ್ತು ಗುರಿಯನ್ನು ಹೊಂದಿದವನು ಮಾತ್ರ ತನ್ನ ಬದುಕಿನಲ್ಲಿ ಏನ್ನಾದರೂ ಸಾಧನೆಯನ್ನು ಮಾಡಲು ಸಾದ್ಯವಿದೆ, ಪಠ್ಯದ ಕಡೆಗೆ ಗಮನವನ್ನು ನೀಡಿದವರು ಮುಂದಿನ  ದಿನದಲ್ಲಿ ಸಾಧಕರಾಗುತ್ತಾರೆ, ಇದಕ್ಕೆ ಸತತವಾದ ಪರಿಶ್ರಮ ಅಗತ್ಯ ಇದೆ. ಪಿ.ಯು ಮತ್ತು ಪದವಿಯ 5 ವರ್ಷಗಳಲ್ಲಿ ಉತ್ತಮವಾಗಿ ಅಭ್ಯಾಸವನ್ನು ಮಾಡಿದರೆ ಮುಂದಿನ ನಿಮ್ಮ 50 ವರ್ಷ ಚನ್ನಾಗಿ ಇರಬಹು ದಾಗಿದೆ ಈಗ ಸೋಮಾರಿಗಳಾದರೆ ಜೀವನದಲ್ಲಿ ಕಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದು ವಿದ್ಯಾರ್ಥಿ ಗಳನ್ನು ಎಚ್ಚರಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರತಿಭಾ ಪುರಸ್ಕಾರಕ್ಕೆ ಭಾಜನ ರಾಗುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ನಿರಂತರ ಶಿಸ್ತು ಹಾಗೂ ಗುರಿಯೊಂದಿಗೆ ಅಧ್ಯಯನ ಮಾಡಿದರೆ ಉತ್ತಮ ಫಲಿತಾಂಶಗಳಿಸಲು ಯಶಸ್ಸು ಕಾಲೇಜಿನ ಹೆಮ್ಮೆಯಾಗಿದ್ದು, ಪ್ರಥಮ ಪಿಯು ವಿದ್ಯಾರ್ಥಿಗಳು ಅವರ ಸಾಧನೆಯನ್ನು  ಯೋಜಿತವಾಗಿ ಓದಿನತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿ ವಿದ್ಯಾರ್ಥಿಯ ಪ್ರತಿಭೆ ನವೀಕರಣಗೊಳ್ಳುತ್ತದೆ. ಹೆಚ್ಚಿಸುವುದರ ಮಾಡಲು ಜೊತೆಗೆ ಪ್ರೇರಣೆ ಆತ್ಮವಿಶ್ವಾಸ ಇನ್ನಷ್ಟು ಸಾಧನೆ ನೀಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ  ಸಾಮಥ್ರ್ಯದೊಂದಿಗೆ ಶ್ರಮಿಸಿದರೆ ಉತ್ತಮ ಅಂಕಗಳೊಂದಿಗೆ ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಅವರ ಕಲಿಕೆಯ ಜೊತೆಗೆ ಪೋಷಕರ ನಿರಂತರ ಸಹಕಾರ, ಮಾರ್ಗದರ್ಶನ ಹಾಗು ಪ್ರೋತ್ಸಾಹವೂ ಅಗತ್ಯವಾಗಿದೆ. ವಿದ್ಯಾರ್ಥಿಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರದಷ್ಟೇ ಅನುಕೂಲಕರ ಪಾತ್ರವೂ ಮಹತ್ವದ್ದಾಗಿದೆ. ಮನೆಯಲ್ಲಿ ಓದಿಗೆ ಅನುಕೂಲಕರ ವಾತಾವರಣ ಕಲ್ಪಿಸಿ. ಮಕ್ಕಳ ಕಲಿಕೆಯ ಬಗ್ಗೆ ನಿರಂತರವಾಗಿ ಅವರು ಉತ್ತಮ ಅಂಕಗಳನ್ನು ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿ ಪಠ್ಯಪುಸ್ತಕಗಳ ಅಧ್ಯಯನದೊಂದಿಗೆ ನಿರಂತರ ಪುನರಾವರ್ತನೆ, ಮಾದರಿ ಪರೀಕ್ಷೆಗಳ ಅಭ್ಯಾಸ ಹಾಗೂ ಶಿಕ್ಷಕರ ಮಾರ್ಗದರ್ಶನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಸ್ಪಷ್ಟ ಗುರಿ. ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮದಿಂದ ಯಾವುದೇ ಸಾಧನೆ ಅಸಾಧ್ಯವಲ್ಲ. ಸಮಯದ ಸದ್ಬಳಕೆ ಮಾಡಿಕೊಂಡು ಶಿಸ್ತು, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಅಧ್ಯಯನ ನಡೆಸಬೇಕು. ಪೋಷಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರದೆ ಅವರ ಆಸಕ್ತಿ ಮತ್ತು ಸಾಮಥ್ರ್ಯಕ್ಕೆ  ತಕ್ಕಂತೆ ಪ್ರೋತ್ಸಾಹ ನೀಡಿದರೆ ಉತ್ತಮ ಫಲಿತಾಂಶ ಸಾಧ್ಯವಾಗುತ್ತದೆ ಎಂದು ಡಾ. ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ನಿವೃತ್ತ ಉಪನ್ಯಾಸಕರು ಹಾಗೂ ಕವಿಗಳಾದ ನಿಸಾರ್ ಅಹಮದ್, ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ವೃತ್ತಿಜೀವನದ ಗುರಿಯನ್ನು ಸಾಧಿಸಲು ಪಿಯುಸಿ ಶಿಕ್ಷಣವು ಅತ್ಯಂತ ಮಹತ್ವದ ಘಟ್ಟವಾಗಿದ್ದು, ಈ ಅವಧಿಯನ್ನು ಕ್ರಮವಾಗಿ ಬಳಸಿಕೊಳ್ಳಬೇಕು. ಪಿಯುಸಿ ಸಮರ್ಪಕವಾಗಿ ಪರಿಶ್ರಮ ಹಂತದಲ್ಲಿ ವಿದ್ಯಾರ್ಥಿಗಳ ಹಾಗೂ ಸಮಯದ ಸದ್ಬಳಕೆಗೆ ಆದ್ಯತೆ ನೀಡಬೇಕು. ಈ ಹಂತದಲ್ಲಿ ರೂಪಿಸಿಕೊಳ್ಳುವ ಅಧ್ಯಯನದ ಅಭ್ಯಾಸವೇ ಮುಂದಿನ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಭದ್ರ ಬುನಾದಿಯಾಗುತ್ತದೆ ಯಾವುದೇ ವ್ಯಕ್ತಿಯ ಯಶಸ್ಸಿನ ಹಿಂದೆ ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ತ್ಯಾಗ ಇರುತ್ತದೆ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಬೃಹನ್ಮಠ ಸಂ.ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ಜಿ. ರಾಜೇಶ್ ಮಾತನಾಡಿ, ಶಿಕ್ಷಣವು ಕೇವಲ ಅಂಕಗಳಿಸುವ ಸಾಧನವಲ್ಲ ಉತ್ತಮ ವ್ಯಕ್ತಿತ್ವ, ಸಾಮಾಜಿಕ ಜವಾಬ್ದಾರಿ, ದೇಶಪ್ರೇಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಕ್ತಿಯಾಗಿದೆ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುರುಪಯೋಗ ದಿಂದ ದೂರವಿದ್ದು ತಮ್ಮ ಗುರಿಯತ್ತ ಗಮನ ಹರಿಸಬೇಕು . ಹೊಸದಾಗಿ ಬಂದ ವಿದ್ಯಾರ್ಥಿಯ ಜೀವನದ ಹೊಸ ಅಧ್ಯಾಯ ಇಂದಿನಿಂದ ಆರಂಭವಾಗಿದ್ದು ಉತ್ತಮ ಶಿಕ್ಷಣ ಶಿಸ್ತು ಸಂಸ್ಕಾರ ಮತ್ತು ಕಠಿಣ ಪರಿಶ್ರಮದ ಮೂಲಕ ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಿ ಶಿಕ್ಷಣದ ಅಭಿವೃದ್ಧಿಗೆ ನಮ್ಮ ಸಂಸ್ಥೆಯು ಅಗತ್ಯ ಮೂಲ ಸೌಕರ್ಯ ಉತ್ತಮ ಹೇಳಿದರು

ಇದೇ ಸಂದರ್ಭದಲ್ಲಿ ಗಾರೆಹಟ್ಟಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ .ಎಸ್, ಪದವಿ ಪೂರ್ವ ಇಲಾಖೆಯ ಎನ್.ಜಿ.ಓ. ನಿರ್ದೇಶಕರಾದ ಎ. ನಾಗರಾಜ್, ನಿವೃತ್ತ ಶಿಕ್ಷಕರಾದ ಎನ್. ಆರ್. ಸಿದ್ದಪ್ಪ ಹಾಗೂ 2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಕಲಾ ವಿಭಾಗದಲ್ಲಿ ಕುಮಾರಿ ಸುರಕ್ಷಾ ಭೀಮಸಿ ಹಳ್ಳೂರ, ವಿಜ್ಞಾನ ವಿಭಾಗದಲ್ಲಿ ಕುಮಾರಿ ಸೈಯದ ಸಿಮ್ರಾನ್ .ಕೆ ಮತ್ತು ವಾಣಿಜ್ಯ ವಿಭಾಗದಲ್ಲಿ ಕುಮಾರಿ ರಕ್ಷಿತ .ಟಿರವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕುಮಾರ ಭಗವಂತ .ಟಿ, ಸಹಕಾರ್ಯದರ್ಶಿ ಕುಮಾರಿ ಅಶ್ವಿನಿ .ಎಸ್ ಕ್ರೀಡಾ ಕಾರ್ಯದರ್ಶಿ ಕುಮಾರ್ ವಿನಯ್ ಕುಮಾರ್. ಕೆ.ಬಿ. ಸಾಂಸ್ಕೃತಿಕ ಕಾರ್ಯದರ್ಶಿ ಕುಮಾರಿ ಗಾಯತ್ರಿ .ಪಿ, ಪ್ರವಾಸ ಕಾರ್ಯದರ್ಶಿ ಕುಮಾರ ತೇಜಸ್ ನಾಯ್ಕ ಕೆ. ಭಾಗವಹಿಸಿದ್ದರು. ಅಶ್ವಿನಿ ಪ್ರಾರ್ಥಿಸಿದರೆ, ಸೌಮ್ಯ ಸ್ವಾಗತಿಸಿದರು. ಶಿವಕುಮಾರ್ ಪ್ರಸ್ತಾವಿಕ ನುಡಿಗಳನ್ನಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now