Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೋಸ್ಟರ್ ಬಿಂದು ಸರಿಪಡಿಸಿ, ಒಳ ಮೀಸಲಾತಿ ಜಾರಿಗೊಳಿಸಿ : ಎಂ.ಗುರುಮೂರ್ತಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ರೋಸ್ಟರ್ ಬಿಂದುಗಳನ್ನು ಮೊದಲು ಸರಿಪಡಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಿದ ನಂತರವೇ 56,432 ಹುದ್ದೆಗಳನ್ನು ನೇಮಕ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿಗೆ ಶೇ.15 ರಿಂದ 17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7 ಪರ್ಸೆಂಟ್ ಮೀಸಲಾತಿಯನ್ನು ತರಾತುರಿಯಲ್ಲಿ ಹೆಚ್ಚಿಸಿ ಶೇ.24 ರಷ್ಟು ಮೀಸಲಾತಿಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿಕೊಂಡರೆ ವಿನಃ ರಾಜ್ಯದಿಂದ ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಹೆಚ್ಚುವರಿ ಮೀಸಲಾತಿಯನ್ನು ಷೆಡ್ಯೂಲ್-9 ಕ್ಕೆ ಸೇರಿಸಬೇಕಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಮೇಲೆ ಬಿಜೆಪಿ. ಗೂಬೆ ಕೂರಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

ಚಿತ್ರದುರ್ಗ ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಂಸದ ಎ.ನಾರಾಯಣಸ್ವಾಮಿ, ಛಲವಾದಿ ನಾರಾಯಣಸ್ವಾಮಿ, ಬಸವರಾಜ್ ಬೊಮ್ಮಾಯಿ ಇವರುಗಳು ಒಳ ಮೀಸಲಾತಿ ಜಾರಿಗಾಗಿ ಚಿತ್ರದುರ್ಗದಿಂದ ಪಾದಯಾತ್ರೆ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದು, ಕೇವಲ ಭರವಸೆಯಾಗಿ ಉಳಿದಿದೆ ಎಂದು ಟೀಕಿಸಿದರು.
24 ಪರ್ಸೆಂಟ್ ಮೀಸಲಾತಿ ನೀಡಿದ್ದೇವೆಂದು ಬಿಜೆಪಿ. ಆತುರಾತುರವಾಗಿ ಘೋಷಿಸಿತು. ಈಗಿನ ರಾಜ್ಯ ಸರ್ಕಾರ ಒಳ ಮೀಸಲಾತಿ ನಿಯಮವಿಲ್ಲದೆ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿರುವುದು ಅತ್ಯಂತ ಖಂಡನೀಯ. ರೋಸ್ಟರ್ ಬಿಂದು ನಿಗಧಿಪಡಿಸುವಾಗ 101 ಪರಿಶಿಷ್ಟ ಜಾತಿಗಳಿಗೂ ಅವರವರ ಜನಸಂಖ್ಯೆಗಳನ್ನು ನಿಗಧಿಪಡಿಸಿ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಎಂ.ಗುರುಮೂರ್ತಿ ಆಗ್ರಹಿಸಿದರು.

 

ಡಾ.ಬಿ.ಆರ್.ಅಂಬೇಡ್ಕರ್ ಒಕ್ಕೂಟದ ಅಧ್ಯಕ್ಷ ಶ್ರೀಧರ ಕಲಿವೀರ ಮಾತನಾಡಿ ಒಳ ಮೀಸಲಾತಿಯಿಲ್ಲದೆ 56,432 ಹುದ್ದೆಗಳನ್ನು ತುಂಬುತ್ತೇವೆನ್ನುವ ರಾಜ್ಯ ಸರ್ಕಾರದ ಕ್ರಮ ಅವೈಜ್ಞಾನಿಕ. ಛಲವಾದಿ ಜಾತಿಗಳು ತಕರಾರು ಎತ್ತಿರುವುದರಿಂದ ರೋಸ್ಟರ್ ಬಿಂದುಗಳಲ್ಲಿನ ದೋಷವನ್ನು ಸರಿಪಡಿಸಿ ಸುಪ್ರೀಂಕೋರ್ಟ್ ತೀರ್ಪಿಗೆ ಬದ್ದರಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಸಂವಿಧಾನ ವಿರೋಧಿಯಾಗುತ್ತಾರೆ. ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರಿಗೆ ಒಳ ಮೀಸಲಾತಿ ಜಾರಿಗೊಳಿಸುವ ಇಚ್ಚಾಶಕ್ತಿ ಬೇಕು. ಒಳ ಮೀಸಲಾತಿ ಜಾರಿಗೊಳಿಸಲ್ಲ ಎಂದು ಹೇಳುವುದು ಸಂವಿಧಾನಕ್ಕೆ ವಿರುದ್ದವಾಗಿ ನಡೆದುಕೊಂಡಂತೆ. ಎಸ್ಸಿ.ಎಸ್ಟಿ.ಗಳ ಮೇಲೆ ಬೇರೆ ಜಾತಿಯವರಿಗೆ ಸಿಟ್ಟು ಬರುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಯ ವಂಚಕತನ ನೀತಿ ಅನುಸರಿಸುತ್ತಿದ್ದಾರೆ. ಶೇ.56 ಮೀಸಲಾತಿಯನ್ನು ಸಂವಿಧಾನದ 9 ನೇ ಷೆಡ್ಯುಲ್‍ಗೆ ಸೇರಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ. ನಾಗಮೋಹನ್‍ದಾಸ್ ವರದಿಯನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ರೋಸ್ಟರ್ ಬಿಂದು ಸರಿಪಡಿಸಿ 50 ಪರ್ಸೆಂಟ್ ಮೀಸಲಾತಿ ಕೊಡಿ ಎಂದು ಮನವಿ ಮಾಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ
ಜಯಪ್ಪ, ಗದಗ ಜಿಲ್ಲಾ ಸಂಚಾಲಕ ದುರುಗೇಶ್, ಸುಂದರಮೂರ್ತಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now