ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜ.26: 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ರಾಷ್ಟ್ರಧ್ವಜರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಟಿ.ವೆಂಕಟೇಶ್ ಭಾನುವಾರ ರಾಷ್ಟ್ರಧ್ವಜರೋಹಣ ನೆರವೇರಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತಾತ್ಮ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್