Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಂಸಲೇಖ ಆರೋಗ್ಯದಲ್ಲಿ ಏರುಪೇರು : ಮಗಳು ಕೊಟ್ಟ ಸ್ಪಷ್ಟನೆ ಏನು..?

Facebook
Twitter
Telegram
WhatsApp

 

ನಾದಬ್ರಹ್ಮ ಹಂಸಲೇಖ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದೆಲ್ಲಾ ಸುದ್ದಿ ಹರಿದಾಡುತ್ತಿತ್ತು. ಎದೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿತ್ತು. ಈ ವಿಚಾರ ಬಿರುಗಾಳಿಯಂತೆ ಹಬ್ಬಿದಾಗ ಅಭಿಮಾನಿಗಳು ಕೂಡ ಆತಂಕಗೊಂಡಿದ್ದರು. ಅವರ ಆರೋಗ್ಯದ ಬಗ್ಗೆ ಏನಾಯಿತು ಅಂತ ಎಲ್ಲಡೆ ವಿಚಾರಿಸಲು ಆರಂಭಿಸಿದ್ದರು.

ಹಂಸಲೇಖ ಅವರು ಆರು ತಿಂಗಳಿಗೊಮ್ಮೆ ತಮ್ಮ ಹೆಲ್ತ್ ಚೆಕಪ್ ಮಾಡಿಸುತ್ತಾರೆ. ಹೀಗೆ ಅವರು ಆಸ್ಪತ್ರೆಗೆ ಹೋದಾಗ ಯಾರೋ ತೆಗೆದು ಹಾಕಿದ ಫೋಟೋ ಮತ್ತು ಹೃದಯಾಘಾತವಾಗಿದೆ ಎಂಬ ಕ್ಯಾಪ್ಶನ್ ಎಲ್ಲರನ್ನು ಭಯಭೀತಗೊಳಿಸಿತ್ತು. ಏನೋ ಆಗಿದೆ ಎಂದು ಭಯಗೊಂಡಿದ್ದರು.

ಈ ಗಾಳಿ ಸುದ್ದಿಯಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪೋಸ್ಟ್ ಹಾಕಿದ್ದರು. ಆದಷ್ಟು ಬೇಗ ಹುಷರಾಗಲಿ ಎಂದು ಹಾರೈಸಿದ್ದರು. ಈ ಸುದ್ದಿ ಇನ್ನಷ್ಟು ಹೆಚ್ಚಾಗುತ್ತಿದ್ದಂತೆ ಹಂಸಲೇಖ ಅವರ ಮಗಳು ಉತ್ತರ ನೀಡಿದ್ದಾರೆ. ತಂದೆಯ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬೆಳಗ್ಗೆಯಿಂದಾನು ಹಂಸಲೇಖಾ ಅವರು ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಇದು ಸುಳ್ಳಾಗಿದ್ದು, ಈ ರೀತಿಯ ಸುಳ್ಳು ಸುದ್ದಿಗಳನ್ನೆಲ್ಲಾ ಹಬ್ಬಿಸಬಾರದು ಎಂದು ಹೇಳುವ ಮೂಲಕ ಹಂಸಲೇಖ ಅವರಿಗೆ ಏನು ಆಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!