ಚಿತ್ರದುರ್ಗ. ನ.30: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮಾಡಲು ಸರ್ಕಾರದ ಸೂಚನೆಯಂತೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆಯ ಕೊರತೆಯ ಕಾರಣ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಈಗಾಗಲೆ ಸರ್ಕಾರ ಘೋಷಣೆ ಮಾಡಿದೆ. ಬರದ ಕಾರಣ ಜಾನುವಾರುಗಳಿಗೆ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯಾಗುವ ಸಾಧ್ಯತೆ ಇರುವುದರಿಂದ, ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಿ, ತಕ್ಷಣದಿಂದಲೇ. ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವುವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ನಿಬರ್ಂಧಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಹೀಗಾಗಿ ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವನ್ನು ರೈತರಿಗೆ ಒದಗಿಸಬೇಕಾಗಿರುವುದರಿಂದ, ಜಿಲ್ಲೆಯಲ್ಲಿ ಲಭ್ಯವಿರುವ ಮೇವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ನಿರ್ಬಂಧಿಸಲಾಗಿದೆ.
ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ತಹಸಿಲ್ದಾರರಿಗೆ, ಉಪವಿಭಾಗಾಧಿಕಾರಿಗಳಿಗೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…