ಕಾರವಾರ: ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಇಂದು ವಿಧಿವಶರಾಗಿದ್ದಾರೆ. ಸುಕ್ರೆ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಅನಾರೋಗ್ಯದ ಕಾರಣದಿಂದ ಇಹಲೋಕ ತ್ಯಜಿಸಿದ್ದಾರೆ. ಇವರು ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮಗೌಡ ಅವರನ್ನು ಜಾನಪದ ಕೋಗಿಲೆ ಅಂತಾನೂ ಕರೆಯುತ್ತಾರೆ. ಆದರೆ ಕೆಲವು ತಿಂಗಳುಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದ ಸುಕ್ರೆ ಅವರು ಇಂದು ನಿಧನರಾಗಿದ್ದಾರೆ.
![](https://suddione.com/content/uploads/2024/10/gifmaker_me-5-1.gif)
ಜಾನಪದ ಹಾಡು ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರಾದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಅಇಕೊಂಡು ಹೋಗುವಲ್ಲಿ ಶ್ರಮವಹಿಸಿದ್ದರು. ಸುಕ್ರೆ ಅವರು ಕೂಡ ತಮ್ಮ ತಾಯಿಯ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಹಾಡುಗಳು ಮಾತ್ರವಲ್ಲ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಇವರ ಸಾಧನೆಗೆ ಮೆಚ್ಚಿ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. ಆದರೆ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕರ ಸೇರುಸದೆ ಇದ್ದರೆ ತಮಗೆ ಬಂದಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಾಸ್ ನೀಡಲು ನಿರ್ಧಾರ ಮಾಡಿದ್ದರು.
ಸುಕ್ರೆ ಬೊಮ್ಮಗೌಡ ಅವರ ಕಲೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. 1987ರಲ್ಲಿ ಕರ್ನಾಟಕ ಸರ್ಕಾರ ಅವರ ಕೆಲಸವನ್ನು ಗುರುತಿಸಿತ್ತು. ಅವರ ಕಲೆಗೆ ನಾಡೋಜ ಪ್ರಶಸ್ತಿ ಹಾಗೂ ಜಾನಪದ ಶ್ರೀ ಪ್ರಶಸ್ತಿಯನ್ನು ನೀಡಿತ್ತು. ಇವರಲ್ಲಿರು ಅದ್ಭುತ ಜಾನಪದ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ 2017ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಜಾನಪದ ಕೋಗಿಲೆ ಸುಕ್ರೆ ಅವರನ್ನು ಕಳೆದುಕೊಂಡು ಇಡೀ ರಾಜ್ಯ ಸಂತಾಪ ಸೂಚಿಸಿದೆ.
![](https://suddione.com/content/uploads/2025/02/site.webp)