Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾನಪದ ಮಾಧ್ಯಮಗಳು ಇಂದಿಗೂ ಸಶಕ್ತ : ಬಿ.ಧನಂಜಯ

Facebook
Twitter
Telegram
WhatsApp

 

ಚಿತ್ರದುರ್ಗ, (ನವೆಂಬರ್.30) : ಜಾಗತೀಕರಣ, ಆಧುನಿಕ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳ ಈ ಸಂದರ್ಭದಲ್ಲಿಯೂ ಜಾನಪದ ಮಾಧ್ಯಮಗಳು ಇಂದಿಗೂ ಸಶಕ್ತ ಮಾಧ್ಯಮಗಳಾಗಿವೆ ಎಂದು ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ಅಭಿಪ್ರಾಯ ಪಟ್ಟರು.

ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ಮದಕರಿ ಯುವಕ ಸಂಘ, ಬೆಂಗಳೂರು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಚಿತ್ರದುರ್ಗ ಕರ್ನಾಟಕ ಜಾನಪದ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ನೃತ್ಯ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನಪದ ಮಾಧ್ಯಮ  ಸಂಪ್ರಾದಾಯಿಕ ಹಾಗೂ ಪ್ರಬಲ ಮಾಧ್ಯಮವಾಗಿದ್ದು, ಸಾರ್ವಜನಿಕರಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಲು ಜನಪದ ಕಲಾ ಮಾಧ್ಯಮಗಳು ಇಂದಿಗೂ ಸಶಕ್ತ ಮಾಧ್ಯಮಗಳಾಗಿವೆ. ಜನಪದ ಮಾಧ್ಯಮವನ್ನು ಪೋಷಣೆ ಮಾಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ ಎಂದು ಹೇಳಿದರು.

ಕಲೆ ಜೀವನದ ಅವಿಭಾಜ್ಯ ಅಂಗ. ಕೇವಲ ಹಣದಿಂದ ಸಂಪದ್ಭರಿತ ಮಾನವ ಸಂಪನ್ಮೂಲ  ಏನಿಸಿಕೊಳ್ಳುವುದಿಲ್ಲ. ಅದರ ಜೊತೆಗೆ ಆರೋಗ್ಯ, ಕಲೆಯೂ ಮುಖ್ಯ. ಆಗ ಮಾತ್ರ ಆರೋಗ್ಯಯುತ ಸಂಪನ್ಮೂಲ ನಿರ್ಮಾಣವಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ, ಜಾಗತೀಕರಣದ ಈ ಸಂದರ್ಭದಲ್ಲಿ ಪರಂಪರೆಯ ಅರಿವಿನ ಸಂಕೇತವಾಗಿರುವ ಜನಪದ ಕಲೆ, ಸಾಹಿತ್ಯ, ಸಂಗೀತವನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ವೈವಿದ್ಯಮವಾದ ನಮ್ಮ ಬದುಕಿನ ಮೇಲೆ ಆಧುನಿಕತೆ ಪ್ರಭಾವ ಬೀರಿರುವುದರಿಂದ ನಮ್ಮ ಪಾರಂಪರಿಕ ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ಅನೇಕ ಕಲಾ ಪ್ರಕಾರಗಳು ಆಧುನಿಕತೆಗೆ ತಕ್ಕಂತೆ ಮುಖಾಮುಖಿಯಾಗಬೇಕಿದೆ ಎಂದು ಹೇಳಿದರು.

ಜನಪದ ಕಲೆಗಳು ಸಮಾಜಕ್ಕೆ ಮೌಲ್ಯ, ನೀತಿ ಹಾಗೂ ಸಂದೇಶಗಳನ್ನು ಹೇಳುತ್ತವೆ. ಜನಪದ ಕಲೆ ಕೇವಲ ಮನೋರಂಜನೆಗೆ ಮಾತ್ರ ಸೀಮಿತವಾಗಿಲ್ಲ. ಅದರಲ್ಲಿ ಬದುಕಿನ ಸತ್ವ ಅಡಗಿದೆ. ಹಾಗಾಗಿ ಜನಪದ ಕಲೆಗಳ ಉಳಿವಿಗಾಗಿ ಹೊಸ ರೂಪ ನೀಡಬೇಕಾಗಿದೆ.

ಆಧುನಿಕತೆಯ ಈ ಸಂದರ್ಭದಲ್ಲಿ ಜನಪದ ಸಂಸ್ಕøತಿ ಮರುಹುಟ್ಟು ಪಡೆಯುತ್ತಿದೆ. ಜಾನಪದ ಕಲಾವಿದರು ಉಪಯೋಗಿಸುವ ವಾದ್ಯಗಳು ವಸ್ತುಗಳು ತನ್ನ ಮೂಲ ತತ್ವನ್ನು ಉಳಿಸಿಕೊಂಡು ಹೊಸತನಕ್ಕೆ ಮುಖಾಮುಖಿಯಾಗಬೇಕಿದೆ ಎಂದು ಹೇಳಿದರು.

ಜಾನಪದ ಕಲೆ, ಸಾಹಿತ್ಯ ಮತ್ತು ಸಂಗೀತ ಎಲ್ಲ ಕಲೆಗಳಿಗೂ ಬೇರು. ಆಧುನಿಕತೆ ಕಲೆಗೆ ತಕ್ಕಂತೆ ಜಾನಪದ ಕಲೆ, ಸಾಹಿತ್ಯವನ್ನು ಉಳಿಸಬೇಕಿದೆ. ಇದರಿಂದ ಜಾನಪದ ಪರಂಪರೆ ಹಾಗೂ ಕಲಾವಿದರೂ ಉಳಿಯುವರು ಎಂದು ಅಭಿಪ್ರಾಯಪಟ್ಟರು.

ಜಾನಪದ ನೃತ್ಯ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜಾನಪದ ಸಂಗೀತ, ತತ್ವಪದಗಳು, ಭರತನಾಟ್ಯ, ರಂಗಗೀತೆಗಳು, ಗೋರವರ ಕುಣಿತ, ಭಜನೆ, ಜೋಗಿ ಕುಣಿತ ಹಾಗೂ ಕೋಲಾಟ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರು ಹಾಗೂ ಹಿರಿಯ ಕಲಾವಿದರಾದ ವಿದ್ವಾನ್ ತಿಪ್ಪೇಸ್ವಾಮಿ, ಹಿರಿಯ ಕಲಾವಿದ ಮೂರ್ತಪ್ಪ, ಚಿತ್ರದುರ್ಗ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎ.ನಾಗರಾಜ್, ವದ್ದಿಕೆರೆ ಗುರು ಕರಿಬಸವೇಶ್ವರಸ್ವಾಮಿ ಮಠದ ವದ್ದಿಕೆರೆ ಕಾಂತರಾಜ್, ಮದಕರಿ ಯುವಕ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!