ಮಂಡ್ಯ: ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುತ್ತಾರೆ ಅಂದ್ರೆ ಎಲ್ಲರ ಚಿತ್ತ ಆ ಕಡೆಗೆ ಇರುತ್ತದೆ. ಇದೀಗ ನಾಡಿನ ಭವಿಷ್ಯ ನುಡಿದಿದ್ದು ಮುಂದಿನ ದಿನಗಳಲ್ಲಿ ಅನ್ನ – ನೀರಿಗೂ ಹಾಹಾಕಾರ ಶುರುವಾಗಲಿದೆ ಎಂದಿದ್ದಾರೆ. ಹವಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರೀ ಏರುಪೇರಾಗಲಿದೆ. ಈ ಹವಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಯಾಗಲಿದೆ. ಅಪಮೃತ್ಯುಗಳ ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯವನ್ನು ನುಡಿದಿದ್ದಾರೆ.
ಖುಷಿಯ ವಿಚಾರ ಅಂದ್ರೆ ಕರ್ನಾಟಕಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂಬ ಸಮಾಧಾನಕರ ಮಾತನ್ನ ಹೇಳಿದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೂ ಗುರು ಸ್ಥಾನದಲ್ಲಿದ್ದು, ಸರಿ ತಪ್ಪುಗಳನ್ನು ತಿದ್ದಿ ಬುದ್ದಿ ಸನ್ಮಾರ್ಗದಲ್ಲಿ ನಡೆಸಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ದೈವಾರಾಧನೆಗಳು ಹೆಚ್ಚಿದ ಪರಿಣಾಮ ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿರಲಿದೆ. ರಾಜ್ಯದ ಜನರು ದೈವಾರಾಧನೆಯ ಮೂಲಕ ಸಮೃದ್ಧಿ ಜೀವನ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
2026ರಲ್ಲಿ ಸಂಭವಿಸಬಹುದಾದಂತ ದುರಂತಗಳ ಬಗ್ಗೆ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇದು ಹಲವರ ಆತಂಕವನ್ನು ಹೆಚ್ಚಿಸಿದ್ದರೆ, ಕರ್ನಾಟಕಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದರ ಬಗ್ಗೆ ಸಮಾಧಾನಕರವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











