ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷಕ್ಕೆ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆಶಿ ತಮ್ಮ ನೇತೃತ್ವದಲ್ಲಿ ಪಕ್ಷದ ಬಾವುಟ ಕೊಟ್ಟು ಬರ ಮಾಡಿಕೊಂಡಿದ್ದಾರೆ. ಈ ವೇಳೆ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ಬೇಲೂರು ಕೃಷ್ಣಪ್ಪ ಸೇರಿದಂತೆ ಹಲವರು ಇದ್ದರು.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು, ಮಾಜಿ ಸಂಸದರಾದ ಆಯನೂರು ಮಂಜುನಾಥ್ ಹಾಗೂ ಶಿಕಾರಿಪುರದ ನಾಗರಾಜ್ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @BNChandrappa1, ಸಚಿವರಾದ ಮಧು ಬಂಗಾರಪ್ಪ, ಜಿಲ್ಲಾಧ್ಯಕ್ಷರಾದ ಹೆಚ್.ಎಸ್ ಸುಂದರೇಶ್… pic.twitter.com/lpDvSblRFU
— Karnataka Congress (@INCKarnataka) August 24, 2023
ಇನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿರುವ ಡಿಸಿಎಂ ಶಿವಕುಮಾರ್, ಆಯನೂರು ಮಂಜುನಾಥ್ ಅವರಿಗೀ ನಾವೂ ಯಾವುದೇ ಭರವಸೆ ನೀಡಿ, ಪಕ್ಷಕ್ಕೆ ಕರೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷ ಬಸ್ ಸೀಟ್ ನಂತೆ ಅಲ್ಲ. ಟಿಕೆಟ್ ತಗೊಂಡು ಎದ್ದೋಗಬಾರದು. ಇದೊಂದು ಖಾಯಂ ಸೀಟು. ಕಾಂಗ್ರೆದ್ ಸದಸ್ಯತ್ವ ಪಡೆಯುವುದೇ ಸೌಭಾಗ್ಯ ಎಂದಿದ್ದಾರೆ.
ನಾನು ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ. ಅವರವರ ಸಾಮರ್ಥ್ಯದ ಆಧಾರದ ಮೇಲೆ ನಿರ್ಧಾರವಾಗುತ್ತೆ. ಸಿಎಂ, ಹೈಕಮಾಂಡ್ ಈ ಸಂಬಂಧ ನಿರ್ಧಾರ ಮಾಡ್ತಾರೆ. ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಮುಂದೆ ಬರುತ್ತಾರೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು, ಜಿಲ್ಲಾ ಮಟ್ಟದಲ್ಲಿ ಸೇರ್ಪಡೆ ಮಾಡಿಕೊಳ್ಳಿ. ವಿವಾದಿತ ವ್ಯಕ್ತಿಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ. ಉಳಿದಂತೆ ಯಾರೇ ಬಂದರೂ ಆಹ್ವಾನಿಸಿ. ವಿರೋಧ ಪಕ್ಚಗಳು ಏನೇ ಟೀಕೆ ಮಾಡಲಿ, ನಾವು ವೋಟ್ ಶೇರಿಂಗ್ ಹೆಚ್ಚಿಸಿಕೊಳ್ಳಬೇಕಿದೆ ಎಂದಿದ್ದಾರೆ.