ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 16 : ಹಿರಿಯೂರಿನ ಜೆಡಿಎಸ್ ಮುಖಂಡ ಹಾಗೂ ನಿವೃತ್ತ ಮುಖ್ಯ ಇಂಜಿನಿಯರ್ ಎಂ. ರವೀಂದ್ರಪ್ಪನವರಿಗೆ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಅಂಗವಾಗಿ ” ಎಮಿನೆಂಟ್ ಇಂಜಿನಿಯರ್ ( ಶ್ರೇಷ್ಠ ಅಭಿಯಂತರರು) ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನ ಇಂಜಿನಿಯರ್ ಇನ್ಟೂಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಸೆ. 15ರಂದು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಎಂ. ರವೀಂದ್ರಪ್ಪನವರು ಲೋಕೋಪಯೋಗಿ ಇಲಾಖೆ, ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ, ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಸೂಪರಿಂಟೆಂಡೆಂಟ್ ಮತ್ತು ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಣನಿಯ ಸೇವೆ ಹಾಗೂ ಅಂತರ್ಜಲ ನಿರ್ದೇಶನಾಲಯದ ನಿರ್ದೇಶಕರಾಗಿ ಹಾಗೂ ಅಟಲ್ ಭೂಜಲ್ ಯೋಜನೆಯ ಯೋಜನಾ ನಿರ್ದೇಶಕರಾಗಿ ಅಂತರ್ಜಲ ಅಭಿವೃದ್ಧಿಗಾಗಿ ಸಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.






