ಬೆಂಗಳೂರು.ಆಗಸ್ಟ್.1: ಪ್ರಸ್ತುತ ಕಂದಾಯ ಇಲಾಖೆಯು ಕಾಲಕಾಲಕ್ಕೆ ಹೊರಡಿಸಿರುವ ಸರ್ಕಾರಿ ಆದೇಶಗಳು ಹಾಗೂ ಸುತ್ತೋಲೆಗಳ ಅನುಸಾರ ಕಂದಾಯ ಆಡಳಿತದ ಮೂಲಕ ಅರ್ಹ ವ್ಯಕ್ತಿಗಳಿಗೆ ವಾಸಸ್ಥಳ ಪ್ರಮಾಣ ಪತ್ರ (Residential Certificate) ಹಾಗೂ ಡೊಮಿಸೈಲ್ ಪ್ರಮಾಣ ಪತ್ರ (Domicile Certificate) ಗಳನ್ನು ನೀಡಲಾಗುತ್ತಿದೆ.
ಕಂದಾಯ ಇಲಾಖೆಯಿಂದ ನೀಡಲಾಗುತ್ತಿರುವ ಡೊಮಿಸೈಲ್ ಪ್ರಮಾಣ ಪತ್ರವು ಅದನ್ನು ಹೊಂದಿರುವ ವ್ಯಕ್ತಿಯು ಕರ್ನಾಟಕ ರಾಜ್ಯದ ಶಾಶ್ವತ ನಿವಾಸಿಯಾಗಿರುವುದನ್ನು ದೃಢೀಕರಿಸುವ ದಾಖಲೆಯಾಗಿದ್ದು, ಪ್ರವೇಶಾತಿ, ವಿದ್ಯಾರ್ಥಿವೇತನ, ಉದ್ಯೋಗ, ಕಲ್ಯಾಣ ಯೋಜನೆಗಳು ಹಾಗೂ ಇತರೆ ಕಾನೂನುಬದ್ಧ ಆಡಳಿತಾತ್ಮಕ ಉದ್ದೇಶಗಳಿಗಾಗಿ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು, ಕೆಲವು ಅರ್ಹತೆಗಳನ್ನು ಹೊಂದಿರಬೇಕು.
ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಹತೆಗಳು: ಖಚಿತಗೊಳಿಸಿಕೊಳ್ಳುವ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಇವುಗಳಲ್ಲಿನ ಒಂದು ಅಥವಾ ಹೆಚ್ಚಿನ ಅಂಶಗಳನ್ನು ಪರಿಗಣಿಸಲಾಗುತ್ತದೆ.
ಕರ್ನಾಟಕದಲ್ಲಿ ಜನನ- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು. ಸಾಮಾನ್ಯ ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ, ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ ಹತ್ತು (10) ವರ್ಷಗಳ ಕಾಲ ಸಾಮಾನ್ಯವಾಗಿ ವಾಸವಾಗಿರಬೇಕು. ಶಿಕ್ಷಣ ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ, 12ನೇ ತರಗತಿ ಅಥವಾ ತತ್ಸಮಾನ ಹಂತದವರೆಗೆ ಕನಿಷ್ಠ ಹತ್ತು (10) ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.
ಪೋಷಕರು ಅಥವಾ ಸಂಗಾತಿಯ ವಾಸಸ್ಥಳ ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ, ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.
ವಸತಿ ಆಸ್ತಿ ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಅಥವಾ ಇತರೆ ಸ್ಥಿರಾಸ್ತಿಯ ಮಾಲೀಕತ್ವವನ್ನು ಹೊಂದಿರಬೇಕು ಅಥವಾ ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.
ಸರ್ಕಾರಿ ದಾಖಲೆಗಳು: ಮತದಾರರ ಪಟ್ಟಿ, ಆಧಾರ್, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೆÇೀಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು.
ಸರ್ಕಾರಿ, ಸಾರ್ವಜನಿಕ ಸೇವೆ: ಅರ್ಜಿದಾರರು ಅಥವಾ ಅವರ ತಂದೆ, ತಾಯಿಯು ಕರ್ನಾಟಕ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಗಣನೀಯ ಅವಧಿಯಸೇವೆ ಸಲ್ಲಿಸಿರಬೇಕು. ವಿವಾಹ:- ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿರಬೇಕು. ಇತರೆ ಪುರಾವೆಗಳು ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ್ಯ ಹೊಂದಿರಬೇಕು.
ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಿಸಿದ ಅಟಲ್ ಜೀ ಜನಸ್ನೇಹಿ ಕೇಂದ್ರಗಳು, ಕರ್ನಾಟಕ ಒನ್, ಗ್ರಾಮ ಒನ್, ಸಿಎಸ್‍ಸಿ ಗಳಲ್ಲಿ ಅರ್ಜಿ ಸಲ್ಲಿಸಿ, ಸಾರ್ವಜನಿಕರು ಸೇವೆ ಪಡೆದುಕೊಳ್ಳಬಹುದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











