Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್-1 ಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ : ಸಂಸದ ಗೋವಿಂದ ಎಂ ಕಾರಜೋಳ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಪ್ಯಾಕೇಜ್ ವ್ಯಾಪ್ತಿಯ ಕಾಮಗಾರಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಅಂತಿಮವಾಗಿ ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದ್ದಾರೆ.

ಈ ಮಹತ್ವಾಕಾಂಕ್ಷೆಯ ಭದ್ರಾ ಮೇಲ್ದಂಡೆ ಯೋಜನೆಯನ್ನು ಒಟ್ಟು ಎರಡು ಪ್ಯಾಕೇಜ್ಗಳನ್ನಾಗಿ ವಿಂಗಡಿಸಿ ಕೈಗೆತ್ತಿಕೊಳ್ಳಲಾಗಿತ್ತು. ಮೊದಲ ಪ್ಯಾಕೇಜ್ನಲ್ಲಿ ತುಂಗಾ ಜಲಾಶಯದಿಂದ 17.54 ಟಿ.ಎಂ.ಸಿ. ನೀರನ್ನು ಎತ್ತಿ ಭದ್ರಾ ಜಲಾಶಯಕ್ಕೆ ತುಂಬಿಸುವ ಕಾರ್ಯ ಅಡಗಿದ್ದರೆ, ಎರಡನೇ ಪ್ಯಾಕೇಜ್ನಲ್ಲಿ ಭದ್ರಾ ಜಲಾಶಯದಿಂದ ಒಟ್ಟು 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಸುವ ಗುರಿಯನ್ನು ಹೊಂದಲಾಗಿದೆ. ಇದೀಗ ಮೊದಲ ಪ್ಯಾಕೇಜ್ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಕಣಗಲಕೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಸಬಾ ಹೋಬಳಿಯ ಕೆ.ಕನಬೂರು ಹಾಗೂ ಮುತ್ತಿನಕೊಪ್ಪ ಗ್ರಾಮಗಳ ಸರ್ವೆ ನಂಬರುಗಳಲ್ಲಿ ಬರುವ ಸುಮಾರು 7.53 ಹೆಕ್ಟೇರ್ ಅರಣ್ಯ ಭೂಮಿಯಲ್ಲಿ 220 ಕೆವಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಾಣ ಮಾಡಲು ಅರಣ್ಯ ಇಲಾಖೆಯಿಂದ ಅನುಮತಿ ಕೋರಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಸದರಿ ಪ್ರಸ್ತಾವನೆಗೆ ಶೀಘ್ರ ಒಪ್ಪಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಸದರಾದ ಗೋವಿಂದ ಎಂ. ಕಾರಜೋಳ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರಾದ ಭೂಪೇಂದ್ರ ಯಾದವ್ ಅವರಿಗೆ ನಿರಂತರವಾಗಿ ಸತತ ಒತ್ತಡ ಹೇರಿದ್ದರು. ಇದರ ಪರಿಣಾಮವಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ದಿನಾಂಕ 10.07.2026 ರಂದು ಅಂತಿಮವಾಗಿ 7.53 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆಯನ್ನು ನೀಡಿದೆ.

ಕೇಂದ್ರ ಸರ್ಕಾರವು ಈ ತಾತ್ವಿಕ ಅನುಮೋದನೆಯನ್ನು ನೀಡುವಾಗ ಹಲವು ಕಟ್ಟುನಿಟ್ಟಿನ ಷರತ್ತು ಹಾಗೂ ನಿಬಂಧನೆಗಳನ್ನು ವಿಧಿಸಿದೆ. ಯೋಜನೆಯ ಪ್ರಾಥಮಿಕ ಬಳಕೆದಾರ ಸಂಸ್ಥೆಯಾದ ಕರ್ನಾಟಕ ನೀರಾವರಿ ನಿಗಮವು ಪಲ್ಲಟಗೊಳಿಸಲಾದ ಅರಣ್ಯ ಭೂಮಿಯಲ್ಲಿ ಕನಿಷ್ಟ ಸಂಖ್ಯೆಯ ಮರಗಳನ್ನು ಮಾತ್ರ ಕತ್ತರಿಸಬೇಕು ಮತ್ತು ಕೆಲಸದ ಅನುಷ್ಠಾನಕ್ಕಾಗಿ ಸಾಮಗ್ರಿಗಳನ್ನು ಸಾಗಿಸಲು ಅರಣ್ಯ ಪ್ರದೇಶದ ಒಳಗೆ ಯಾವುದೇ ಹೆಚ್ಚುವರಿ ಅಥವಾ ಹೊಸ ರಸ್ತೆ ಮಾರ್ಗಗಳನ್ನು ನಿರ್ಮಿಸಬಾರದು ಎಂದು ಸೂಚಿಸಲಾಗಿದೆ. ಅದರೊಂದಿಗೆ, ಈ ಅರಣ್ಯ ಭೂಮಿಯನ್ನು ಯೋಜನೆಯ ಪ್ರಸ್ತಾವನೆಯಲ್ಲಿ ನಿರ್ದಿಷ್ಟಪಡಿಸಿದ ಉದ್ದೇಶವನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು ಹಾಗೂ ಯೋಜನೆಗೆ ಬಳಸಲಾಗುವ ಒಟ್ಟು ಅರಣ್ಯ ಪ್ರದೇಶವು 7.53 ಹೆಕ್ಟೇರ್ ಪ್ರದೇಶವನ್ನು ಯಾವುದೇ ಕಾರಣಕ್ಕೂ ಮೀರಬಾರದು ಎನ್ನುವ ನಿಬಂಧನೆಯನ್ನು ವಿಧಿಸಲಾಗಿದೆ.

ವಿಶೇಷವಾಗಿ, ಈ ತಾತ್ವಿಕ ಅನುಮೋದನೆಯು ಈ ಅಧಿಕೃತ ಪತ್ರವನ್ನು ಹೊರಡಿಸಿದ ದಿನಾಂಕದಿಂದ ಕೇವಲ 5 ವರ್ಷಗಳ ಅವಧಿಗೆ ಮಾತ್ರ ಮಾನ್ಯವಾಗಿರುತ್ತದೆ. ಒಂದು ವೇಳೆ ನಿಗದಿತ 5 ವರ್ಷಗಳ ಒಳಗೆ ವಿಧಿಸಲಾಗಿರುವ ಈ ಎಲ್ಲಾ ಷರತ್ತುಗಳನ್ನು ಪಾಲಿಸದೇ ಇದ್ದಲ್ಲಿ ಕೇಂದ್ರ ಸರ್ಕಾರವು ಈ ತಾತ್ವಿಕ ಅನುಮೋದನೆಯನ್ನು ರದ್ದುಗೊಳಿಸಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now