Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಸಾವಿರಾರು ಕೋಟಿ ಆಸ್ತಿ‌ ಕಬಳಿಸಲು ಹೊರಟವರಿಗೆ ಅರಣ್ಯ ಇಲಾಖೆ ಶಾಕ್..!

---Advertisement---

ತುಮಕೂರು: ಎಷ್ಟೋ ಕಡೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಮೀನನ್ನು ಗುಳುಂ ಮಾಡಿರುವ ಘಟನೆಗಳು ಬೆಳಕಿಗೆ ಬಂದಿದೆ. ಆದರೆ ತುಮಕೂರಿನಲ್ಲಿ ಅದಕ್ಕೆ ಅವಕಾಶ ನೀಡಿಲ್ಲ. ಅರಣ್ಯ ಇಲಾಖೆ ಎಚ್ಚೆತ್ತುಕೊಂಡ ಕಾರಣ ಸಾವಿರಾರು ಕೋಟಿ ಅರಣ್ಯ ಇಲಾಖೆಯ ಭೂಮಿ ಉಳಿದಿದೆ. ಅರಣ್ಯ ಭೂಮಿ ಅಕ್ರಮ ಒತ್ತುವರಿ ಕುರಿತು ಖುದ್ದು ರಾಜ್ಯ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರೇ ಮಾಹಿತಿ ನೀಡಿದ್ದಾರೆ.

ಇಂದು 300 ಎಕರೆ ಅರಣ್ಯ ಭೂಮಿ ಉಳಿವು ಬುಕ್ಕಾಪಟ್ಟಣ ವನ್ಯ ಜೀವಿಧಾಮದಲ್ಲಿ ಯಶಸ್ವಿ ತೆರವು ಕಾರ್ಯಾಚರಣೆಯನ್ನ ಮಾಡಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾವದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತಿಗದಹಳ್ಳಿ ಮೀಸಲು ಅರಣ್ಯದಲ್ಲಿ ಇಂದು 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಕ್ರಮದ ವಿರುದ್ಧ ಸಮರ ಸಾರಲಾಗಿದೆ. ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿತ್ತು. ಆದರೆ ಈ ಭೂಮಿಯನ್ನ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೋಂದಾಯಿತವಾಗಿದೆ.

ಹಾಸನ – ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment