Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂತಾರ-1, ಟಾಕ್ಸಿಕ್ ಸಿನಿಮಾದಿಂದ ಅರಣ್ಯ ನಾಶ ಆರೋಪ : ಇನ್ಮುಂದೆ ಈ ರೂಲ್ಸ್ ಕಡ್ಡಾಯ..!

---Advertisement---

ಬೆಂಗಳೂರು: ಇಡೀ ಸಿನಿಮಾ ಇಂಡಸ್ಟ್ರಿಯ ಬಹುನಿರೀಕ್ಷಿತ ಸಿನಿಮಾ‌ಗಳು ಎಂದರೆ ಅದು ಕಾಂತಾರ 1 ಹಾಗೂ ಟಾಕ್ಸಿಕ್. ಬರೀ ಕನ್ನಡ ಮಾತ್ರವಲ್ಲ ಇಡೀ ದೇಶವೇ ಈ ಎರಡು ಸಿನಿಮಾಗಳ ಮೇಲೆ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆದರೆ ಈ ಎರಡು ಸಿನಿಮಾದ ಅರಣ್ಯ ಇಲಾಖೆಯ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇದನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮಹತ್ವದ ಆದೇಶದಲ್ಲಿ ಇನ್ಮುಮನದೆ ಅರಣ್ಯದಲ್ಲಿ ಶೂಟ್ ಮಾಡುವುದಕ್ಕೆ ಅಪರ ಮುಖ್ಯ ಕಾರ್ಯದರ್ಶಿಗಳ ಅನುಮತಿ ಕಡ್ಡಾಯವಾಗಿ ಬೇಕಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಯಾವುದೇ ಅರಣ್ಯ ಪ್ರದೇಶದಲ್ಲಿ ಇನ್ಮುಂದೆ ಸಿನಿಮಾ, ಸಾಕ್ಷ್ಯಚಿತ್ರ ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯವಾಗಿರುತ್ತದೆ. ಚಿತ್ರತಂಡದ ಕೋರಿಕೆ ಮೇರೆಗೆ ಅನುಗುಣವಾಗಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಅರಣ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇನ್ಮುಂದೆ ಯಾವುದೇ ಸೀರಿಯಲ್, ಸಿನಿಮಾವಾಗಲಿ ಅಪರ ಮುಕಜ್ಯ ಕಾರ್ಯದರ್ಶಿಯ ಅನುಮತಿ ಪಡೆದು ಚಿತ್ರೀಕರಣ ಮಾಡಬೇಕಿದೆ.

ಶೂಟಿಂಗ್ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಾಧ್ಯತೆ ಇದೆ. ಇದು ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ವನ್ಯ ಜೀವಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸಬೇಕು ಎಂಬ ಕಾರಣಕ್ಕೆ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment