ಬೆಂಗಳೂರು: ಇಡೀ ಸಿನಿಮಾ ಇಂಡಸ್ಟ್ರಿಯ ಬಹುನಿರೀಕ್ಷಿತ ಸಿನಿಮಾಗಳು ಎಂದರೆ ಅದು ಕಾಂತಾರ 1 ಹಾಗೂ ಟಾಕ್ಸಿಕ್. ಬರೀ ಕನ್ನಡ ಮಾತ್ರವಲ್ಲ ಇಡೀ ದೇಶವೇ ಈ ಎರಡು ಸಿನಿಮಾಗಳ ಮೇಲೆ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆದರೆ ಈ ಎರಡು ಸಿನಿಮಾದ ಅರಣ್ಯ ಇಲಾಖೆಯ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇದನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮಹತ್ವದ ಆದೇಶದಲ್ಲಿ ಇನ್ಮುಮನದೆ ಅರಣ್ಯದಲ್ಲಿ ಶೂಟ್ ಮಾಡುವುದಕ್ಕೆ ಅಪರ ಮುಖ್ಯ ಕಾರ್ಯದರ್ಶಿಗಳ ಅನುಮತಿ ಕಡ್ಡಾಯವಾಗಿ ಬೇಕಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಯಾವುದೇ ಅರಣ್ಯ ಪ್ರದೇಶದಲ್ಲಿ ಇನ್ಮುಂದೆ ಸಿನಿಮಾ, ಸಾಕ್ಷ್ಯಚಿತ್ರ ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯವಾಗಿರುತ್ತದೆ. ಚಿತ್ರತಂಡದ ಕೋರಿಕೆ ಮೇರೆಗೆ ಅನುಗುಣವಾಗಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಅರಣ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇನ್ಮುಂದೆ ಯಾವುದೇ ಸೀರಿಯಲ್, ಸಿನಿಮಾವಾಗಲಿ ಅಪರ ಮುಕಜ್ಯ ಕಾರ್ಯದರ್ಶಿಯ ಅನುಮತಿ ಪಡೆದು ಚಿತ್ರೀಕರಣ ಮಾಡಬೇಕಿದೆ.
ಶೂಟಿಂಗ್ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಾಧ್ಯತೆ ಇದೆ. ಇದು ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ವನ್ಯ ಜೀವಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸಬೇಕು ಎಂಬ ಕಾರಣಕ್ಕೆ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















