Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಕಸಾಪ ಘಟಕಗಳ ರಚನೆ : ರಾಮಲಿಂಗಶೆಟ್ಟಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಜು.02) :  ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಗ್ರಾಮೀಣ ಪ್ರದೇಶದಲ್ಲಿಯೂ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ರಾಮಲಿಂಗಶೆಟ್ಟಿ ಹೇಳಿದ್ದಾರೆ.

ಭಾನುವಾರ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಗ್ರಾಮದಲ್ಲಿ ಏರ್ಪಡಿಸಿದ್ದ ಕವನ ಸಂಕಲನ ಬಿಡುಗಡೆ ಮತ್ತು ಹೋಬಳಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಸಾಪ ಇದೀಗ ಹೋಬಳಿ ಘಟಕಗಳನ್ನು ಸ್ಥಾಪಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈಗಾಗಲೇ ಭರಮಸಾಗರ ಮತ್ತು ತುರುವನೂರು ಹೋಬಳಿ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ.

ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಘಟಕಗಳನ್ನು ರಚಿಸಲಾಗುವುದು.  ಸಿರಿಗೆರೆಯ ಯುವ ಲೇಖಕ ಟಿ.ಆರ್.ಅವಿನಾಶ್ ತತ್ವ ಸಾರುವ ಪೈರು ಎಂಬ ಕವನ ಸಂಕಲನ ಬಿಡುಗಡೆಯಾಗಿದೆ. ಹಳ್ಳಿಗಳಲ್ಲಿ ಕನ್ನಡದ ಬಗ್ಗೆ ಒಲವು ಹೊಂದಿರುವ ಯುವಕರು ಹಾಗೂ ಹಿರಿಯರು ದೊಡ್ಡ ಪ್ರಮಾಣದಲ್ಲಿದ್ದಾರೆ. ಇವುರುಗಳನ್ನು ಗುರುತಿಸಿ ಸೂಕ್ತವಾದ ಅವಕಾಶಗಳನ್ನು ಒದಗಿಸಲಾಗುವುದು ಎಂದರು.

ನಿವೃತ್ತ ಶಿಕ್ಷಕ ರೇವಣಸಿದ್ದಪ್ಪ ಮಾತನಾಡಿ, ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ಪ್ರತಿ ಹೋಬಳಿ ಮತ್ತು ಹಳ್ಳಿಗಳಲ್ಲಿ ಅಸ್ತಿತ್ವ ಹೊಂದಿದೆ. ಘಟಕಗಳಲ್ಲಿ ಜವಾಬ್ದಾರಿ ಹೊಂದಿರುವವರು ಕೇವಲ ನಾಮಕಾವಸ್ತೆಗೆ ಹುದ್ದೆ ಹೊಂದಬಾರದು. ತಿಂಗಳಿಗೆ ಕನಿಷ್ಟ ಒಂದು ಕಾರ್ಯಕ್ರಮವನ್ನಾಗಿ ಆಯೋಜಿಸಬೇಕು. ಕಲೆ,ಸಾಹಿತ್ಯ, ಸಂಸ್ಕøತಿಯ ಬಗ್ಗೆ ಜನರಲ್ಲಿ ಆಸಕ್ತಿ ಉಂಟು ಮಾಡಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹೆಚ್ಚು ಸಂಖ್ಯೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೆಗ್ಗೆರೆ ಗ್ರಾಮದ ಟಿ.ಆರ್.ಅವಿನಾಶ್ ರಚಿಸಿರುವ ತತ್ವ ಸಾರುವ ಪೈರು ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ತಾಲ್ಲೂಕು ಅಧ್ಯಕ್ಷರಾದ ರಾಮಲಿಂಗಶೆಟ್ಟಿಯವರಿಗೆ ತುರುವನೂರು ಹೋಬಳಿಯ ನೂತನ ಅಧ್ಯಕ್ಷರಾದ ಎ.ಬಸಣ್ಣನವರಿಗೆ ಪರಿಷತ್ತಿನ ಬಾವುಟ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಸಾಪ ಪದಾಧಿಕಾರಿಗಳಾದ ವೆಂಕಟೇಶ್, ಎಂ.ವಿಶ್ವನಾಥ್, ತಿಪ್ಪೇಸ್ವಾಮಿ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

error: Content is protected !!