ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮನ್ ಚಾಂಡಿ ಇನ್ನಿಲ್ಲ

 

ಸುದ್ದಿಒನ್,

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮನ್ ಚಾಂಡಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ.

ಚಾಂಡಿ ಅವರ ಸಾವನ್ನು ಅವರ ಮಗ ಖಚಿತಪಡಿಸಿದ್ದಾರೆ. ಮೊನ್ನೆಯಷ್ಟೇ ಗಂಟಲು ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಅವರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮುಖಂಡರು ಚಾಂಡಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಉಮನ್ ಚಾಂಡಿ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ತಿರುವನಂತಪುರಂಗೆ ನಂತರ ಅಲ್ಲಿಂದ ಕೊಟ್ಟಾಯಂಗೆ ಕರೆದೊಯ್ದು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು.

ಉಮೆನ್ ಚಾಂಡಿ ಅವರು 31 ಅಕ್ಟೋಬರ್ 1943 ರಂದು ಕೊಟ್ಟಾಯಂ ಜಿಲ್ಲೆಯ ಕುಮರಕೋಮ್‌ನಲ್ಲಿ ಜನಿಸಿದರು. ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶಿಸಿದ ಅವರು 1970ರಲ್ಲಿ ತಮ್ಮ 27ನೇ ವಯಸ್ಸಿನಲ್ಲಿ ಪ್ರಥಮ ಬಾರಿಗೆ ಪೂತುಪಲ್ಲಿಯಿಂದ ಶಾಸಕರಾಗಿ ಸ್ಪರ್ಧಿಸಿ ಗೆದ್ದಿದ್ದರು. ಚಾಂಡಿ ಪೂತುಪಲ್ಲಿ ಕ್ಷೇತ್ರದಿಂದ 12 ಬಾರಿ ಶಾಸಕರಾಗಿ ಗೆದ್ದಿದ್ದಾರೆ. ಚಾಂಡಿ ಅವರು 1977ರಲ್ಲಿ ಕೆ.ಕರುಣಾಕರನ್ ಅವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಚಾಂಡಿ 2004-2006 ರವರೆಗೆ ಮತ್ತು 2011-2016 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಚಾಂಡಿ 2006 ರಿಂದ 2011 ರವರೆಗೆ ಕೇರಳದ ವಿರೋಧ ಪಕ್ಷದ ನಾಯಕರಾಗಿದ್ದರು. 2018 ರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕೆ. ಕರುಣಾಕರನ್, ಎ.ಕೆ.ಆಂಟನಿ ಅವರ ಆಡಳಿತದಲ್ಲಿ ಹಣಕಾಸು ಸಚಿವ, ಗೃಹ ಸಚಿವ ಮತ್ತು ಕಾರ್ಮಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *