
ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 80ನೇ ವಸಂತಕ್ಕೆ ಕಾಲಿಟ್ಟಿದ್ದು, ಬಿಜೆಪಿ ನಾಯಕರು, ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಸೇರಿದಂತೆ ಎಲ್ಲರೂ ಶುಭ ಹಾರೈಸಿದ್ದಾರೆ.

ಇಂದು ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ.
ಯಡಿಯೂರಪ್ಪ ಅವರ ಹುಟ್ಟುಹಬ್ಬ ಹಿನ್ನೆಲೆ ಬೆಳಗ್ಗೆಯಿಂದಾನೇ ಅವರ ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ಬಿಎಸ್ವೈ ಅವರಿಗೆ ಶುಭ ಹಾರೈಸಲು ಕಾಯುತ್ತಿದ್ದಾರೆ. ಇನ್ನು ಗಣ್ಯರೆಲ್ಲಾ ಸೋಷಿಯಲ್ ಮೀಡಿಯಾ ಮೂಲಕ ಯಡಿಯೂರಪ್ಪ ಅವರಿಗೆ ವಿಶ್ ಮಾಡಿದ್ದಾರೆ. ಇನ್ನು ಯಡಿಯೂರಪ್ಪ ಅವರು ಕೂಡ ಇಂದು ಗುರು ರಾಘವೇಂದ್ರ ಮಢಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
GIPHY App Key not set. Please check settings