ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2023ರ ಚುನಾವಣೆಗೆ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಅದರ ಜೊತೆಗೆ ಓಡಾಟ ಕೂಡ ನಡೆಸುತ್ತಿದ್ದಾರೆ. ಈ ಓಡಾಟದ ನಡುವೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ ಎ ಎಲ್ ರಸ್ತೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿದ್ದರಾಮಯ್ಯ ಅವರು ಪೈಲ್ಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಇದರ ಭಾಗವಾಗಿ ಸಿದ್ದರಾಮಯ್ಯ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಆಸ್ಪತ್ರೆಗೆ ಸಿದ್ದರಾಮಯ್ಯ ಅವರ ಜೊತೆಗೆ ಅವರ ಪತ್ನಿ ಕೂಡ ಹೋಗಿದ್ದಾರೆ. ಇಂದು ಅವರಿಗೆ ಶಸ್ತ್ರ ಚಿಕಿತ್ಸೆ ಮುಗಿಸಿ, ಇಂದು ರಾತ್ರಿಯೇ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬಳಿಕ ಮುಂದಿನ ಐದು ದಿನಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.