ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ ಗಳಿಂದ ಬಂಡವಾಳ ಹಿಂತೆಗೆತ ಹಾಗೂ ಖಾಸಗೀಕರಣದಿಂದ ಆಗುವ ಅನಾಹುತಗಳನ್ನ ವಿವರಿಸುವುದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.
ಈ ಸಂಬಂಧ ಮೋದಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನ ಹಾಳು ಕೆಡವಿದೆ. ಆದಾಯ ಹೆಚ್ಚಿಸುವಲ್ಲಿ ವಿಫಲವಾಗಿದೆ. ಇದರ ಪರಿಣಾಮ ಬಂಡವಾಳ ಹಿಂತೆಗೆತದ ಯೋಜನೆಗೆ ಬ್ಯಾಕಿಂಗ್ ವಲಯವನ್ನ ಗುರಿ ಮಾಡುತ್ತಿದೆ. ಆರ್ಥಿಕತೆ ಚೇತರಿಸಿಕೊಳ್ಳಲು ಬ್ಯಾಂಕ್‍ಗಳಿಂದ ಹೂಡಿಕೆ ಹಿಂತೆಗೆದುಕೊಳ್ಳಲು ಸರ್ಕಾರ ತರಾತುರಿ ಮಾಡುತ್ತಿರುವುದು ಆತಂಕಕಾರಿ ಮತ್ತು ಆಧಾರರಹಿತ ಆರ್ಥಿಕ ವಿಧಾನವಾಗಿದೆ ಎಂದಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ವಲಯದ ಬ್ಯಾಂಕ್‍ಗಳಿಂದ ಬಂಡವಾಳ ಹಿಂತೆಗೆತವನ್ನು ಘೋಷಿಸಿದ್ದಾರೆ. ಎಲ್ಲದರ ಪರಿಣಾಮ 1992ರ ವೇಳೆಗೆ ಸಾರ್ವಜನಿಕ ವಲಯದ ಬ್ಯಾಂಕ್‍ಗಳು ದೇಶದ ಮೂಲೆ ಮೂಲೆಗೂ ವ್ಯಾಪಿಸಿ 65,000 ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ ಎನ್ನುವುದನ್ನು ಹಣಕಾಸು ಸಚಿವರು ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.