Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಲಾರದಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

---Advertisement---

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು R.L.ಜಾಲಪ್ಪ ಆಸ್ಪತ್ರೆ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ದೇವರಾಜ ಅರಸು ಮೆಡಿಕಲ್ ಕಾಲೇಜಿನಿಂದ ನೀಡಿದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ.

ಈ ಹಿಂದೆ ಬೆಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾಲಯಗಳು ಸೇರಿದಂತೆ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್‌ ಅನ್ನು ನಯವಾಗಿಯೇ ನಿರಾಕರಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಕೊನೆಗೂ ಗೌರವ ಪುರಸ್ಕಾರವನ್ನು ಸ್ವೀಕರಿಸಿದ್ದಾರೆ.

ಸುಮಾರು ಒಂದು ವರ್ಷದ ಹಿಂದೆಯೇ ಸಂಸ್ಥೆಯ ಘಟಿಕೋತ್ಸವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ, ತಾತ್ವಿಕ ಕಾರಣಗಳಿಂದ ಅವರು ಅದನ್ನು ಪಡೆಯಲು ನಿರಾಕರಿಸಿದ್ದರು. ಇಂದು ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಭಿಕರ ಒತ್ತಾಸೆಗೆ ಮಣಿದು ಅನಿವಾರ್ಯವಾಗಿ ಗೌರವವನ್ನು ಸ್ವೀಕರಿಸಿದರು.

Join WhatsApp

Join Now

Join Telegram

Join Now