ನವದೆಹಲಿ: ದೆಹಲಿಯ ಸಿಬಿಐ ಕಚೇರಿಯಲ್ಲಿ ಇಂದು ಸಿಬಿಐ ನಿರ್ದೇಶಕರಾಗಿ ಕರ್ನಾಟಕದ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿರ್ಗಮಿತ ಸಿಬಿಐ ನಿರ್ದೇಶಕರಾದ ಸುಭೋದ್ ಕುಮಾರ್ ಜೈಸ್ವಾಲ್ ಅವರು ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಎರಡು ವರ್ಷಗಳ ಕಾಲ ಪ್ರವೀಣ್ ಸೂದ್ ಅವೆಉ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.
ಪ್ರವೀಣ್ ಸೂದ್ ಸುಮಾರು 37 ವರ್ಷಗಳ ಅಧಿಕಾರವಧಿಯಲ್ಲಿ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರವೀಣ್ ಸೂದ್ ಕರ್ನಾಟಕ ಕೇಡರ್ ನ 1986ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕರ್ನಾಟಕದ ಡಿಜಿ ಮತ್ತು ಐಜಿಪಿ ಆಗಿದ್ದರು.
ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಜೊತೆಗೆ ಬೆಂಗಳೂರು ನಗೆದಲ್ಲಿ ಉಪ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತ ಮತ್ತು ಮೈಸೂರು ನಗರ ಪೊಲೀಸ್ ಕಮೀಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.





GIPHY App Key not set. Please check settings