ಉಪರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ರಾಜಸ್ಥಾನದ ಮಾಜಿ ಗವರ್ನರ್ ಮಾರ್ಗರೇಟ್ ಅಲ್ವಾ ಆಯ್ಕೆ..!

ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿ ಆಪ್ ಪಕ್ಷ ಆಯ್ಕೆ ಮಾಡಿದೆ. ಈ ವಿಚಾರವನ್ನು ಪ್ರಕಟಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, “ಭಾರತದ ಉಪರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದ” ಎಂದು ಭಾನುವಾರ ಹೇಳಿದ್ದಾರೆ.

ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 5 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನು ಆಳ್ವಾ (80) ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ನಾವು ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ ಬಾರಿ ಅವರು ನಮ್ಮ ಜಂಟಿ ಅಧ್ಯಕ್ಷೀಯ ಅಭ್ಯರ್ಥಿಯನ್ನು ಬೆಂಬಲಿಸಿದರು ಎಂದು ಅವರು ಹೇಳಿದರು, ಈ ಚುನಾವಣೆಯಲ್ಲಿ ಜೆಎಂಎಂ ಕೂಡ ವಿರೋಧ ಪಕ್ಷಗಳೊಂದಿಗೆ ಒಟ್ಟಾಗಿದೆ. ಈ ಚುನಾವಣೆಯಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ಶಿವಸೇನೆಯ ಸಂಜಯ್ ರಾವತ್ ಹೇಳಿದ್ದಾರೆ.

ಹಾಜರಿದ್ದವರಲ್ಲಿ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್, ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ, ಸಿಪಿಐನ ಡಿ ರಾಜಾ ಮತ್ತು ಬಿನೋಯ್ ವಿಶ್ವಂ, ಶಿವಸೇನೆಯ ಸಂಜಯ್ ರಾವುತ್, ಡಿಎಂಕೆಯ ಟಿ ಆರ್ ಬಾಲು ಮತ್ತು ತಿರುಚಿ ಶಿವ, ಎಸ್‌ಪಿಯ ರಾಮ್ ಗೋಪಾಲ್ ಯಾದವ್, ಎಂಡಿಎಂಕೆಯ ವೈಕೊ ಮತ್ತು ಟಿಆರ್‌ಎಸ್‌ನ ಕೆ. ಕೇಶವ ರಾವ್. ಆರ್‌ಜೆಡಿಯ ಎಡಿ ಸಿಂಗ್, ಐಎಂಯುಎಲ್‌ನ ಇಟಿ ಮೊಹಮ್ಮದ್ ಬಶೀರ್ ಮತ್ತು ಕೇರಳ ಕಾಂಗ್ರೆಸ್ (ಎಂ)ನ ಜೋಸ್ ಕೆ.ಮಣಿ ಕೂಡ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *