ವಯೋಸಹಜ ಕಾಯಿಲೆ : ಮಾಜಿ ಸಚಿವ ಅಗಡಿ ನಿಧನ..!

suddionenews
0 Min Read

ಕೊಪ್ಪಳ: ವಯೋಸಹಜ ಕಾಯಿಲೆಯಿಂದ ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನವರಾಗಿದ್ದ ಅಗಡಿ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಕಳೆದ ಒಂದು ತಿಂಗಳಿನಿಂದ ವಿರೂಪಾಕ್ಷಪ್ಪನವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊಪ್ಪಳದ ಕಲ್ಯಾಣ ನಗರದಲ್ಲಿರುವ ನಿವಾಸದಲ್ಲೇ ನಿಧನರಾಗಿದ್ದಾರೆ. ಸಂಜೆ 4 ಗಂಟೆಗೆ ಕೊಪ್ಪಳದ ವೀರಶೈವ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕಲ್ಯಾಣನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

1985-1989 ರವರೆಗೆ ಜನತಾ ಪಾರ್ಟಿಯಿಂದ ಶಾಸಕರಾಗಿದ್ದರು. 1989 ರಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. 1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004ರಲ್ಲಿ ಜೆಡಿಎಸ್ ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *