Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ, ಹಾಲಿ ಶಾಸಕ ಮೇಟಿ ನಿಧನ..!

---Advertisement---

 

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಂತಹ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ವೈ.ಮೇಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಮೇಟಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ವೈದ್ಯರ ಬಳಿ ಚಿಕಿತ್ಸೆಯ ಬಗ್ಗೆಯು ಮಾತನಾಡಿ ಬಂದಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013ರಿಂದ 2016ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೆಚ್.ವೈ.ಮೇಟಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಐದಿ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1996ರ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಲೋಕಸಭೆಗೂ ಜನತಾದಳದಿಂದ ಆಯ್ಕೆಯಾಗಿದ್ದರು. ಇನ್ನು ರಾಜ್ಯ ಸರ್ಕಾರದಲ್ಲಿ ಎರಡು ಭಾರಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದರು.

 

ಎಚ್‌.ವೈ. ಮೇಟಿ ಅಕಾಲಿಕ ನಿಧನದಿಂದ ಈಗ ಬಾಗಲಕೋಟೆ ವಿಧಾನಸಭೆ ಕ್ಷೇತ್ರ ತೆರವಾಗಿದೆ. ಮುಂದಿನ 6 ತಿಂಗಳೊಳಗೆ ಕೇಂದ್ರ ಚುನಾವಣಾ ಆಯೋಗ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲಿದೆ. ಮೇಟಿ ಅವರ ನಿಧನದಿಂದಾಗಿ ಕುಟುಂಬಸ್ಥರು ದುಃಖದಲ್ಲಿದ್ದಾರೆ. ಆತ್ಮೀಯರು, ಆಪ್ತ ಬಳಗದವರು, ಬೆಂಬಲಿಗರು ದುಃಖತಪ್ತರಾಗಿದ್ದು, ಸಂತಾಪ ಸೂಚಿಸಿದ್ದಾರೆ. ಮೇಟಿ ಅವರ ನಿಧನ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now