Connect with us

Hi, what are you looking for?

ಪ್ರಮುಖ ಸುದ್ದಿ

ಶಾಸಕ ಎಂ.ಚಂದ್ರಪ್ಪನವರಿಗಲ್ಲ ಮಾಜಿ ಸಚಿವ ಎಚ್.ಆಂಜನೇಯರವರಿಗೆ ಬುದ್ಧಿ ಭ್ರಮಣೆಯಾಗಿದೆ : ಸಿದ್ದೇಶ್

ಚಿತ್ರದುರ್ಗ :ಹಾಸಿಗೆ ದಿಂಬಿನಲ್ಲಿ ಹಣ ಲೂಟಿ ಹೊಡೆದ ಮಾಜಿ ಸಚಿವ ಎಚ್.ಆಂಜನೇಯನಿಗೆ ಬುದ್ಧಿ ಭ್ರಮಣೆಯಾಗಿದೆಯೇ ವಿನಃ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರಿಗಲ್ಲ ಎಂದು ಹೊಳಲ್ಕೆರೆ ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದೇಶ್ ಆಂಜನೇಯ ವಿರುದ್ಧ ಹರಿಹಾಯ್ದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹೊಳಲ್ಕೆರೆ ತಾಲ್ಲೂಕಿನಾದ್ಯಂತ ಜನತೆಗೆ ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗಬಾರದೆಂದು ಐವತ್ತು ಬೆಡ್‍ಗಳ ಹೊಸ ಆಸ್ಪತ್ರೆಯನ್ನು ಉದ್ಘಾಟಿಸಲು ಶಾಸಕ ಎಂ.ಚಂದ್ರಪ್ಪ ಎಲ್ಲಾ ತಯಾರಿ ನಡೆಸಿದ್ದರು. ಆಗ ಡಿಎಚ್‍ಒ ಐವತ್ತು ಬೆಡ್ ಕೊಡಲು ಆಗಲ್ಲ ಹತ್ತು ಬೆಡ್‍ಗೆ ಅವಕಾಶ ನೀಡುವುದಾಗಿ ಹೇಳಿದ್ದರಿಂದ ಶಾಸಕ ಎಂ.ಚಂದ್ರಪ್ಪ ಗರಂ ಆಗಿ ಹೊಳಲ್ಕೆರೆಯಲ್ಲಿ ಕೋವಿಡ್ ಆಸ್ಪತ್ರೆಯೆ ಬೇಡ ಜನ ಸಾಯಲಿ ಎಂದು ಆಕ್ರೋಶ ವ್ಯಕ್ತಪಡಿದ್ದನ್ನೆ ವಿರೋಧಿಗಳು ಅಪಪ್ರಚಾರ ಮಾಡುತ್ತಿರುವುದು ವ್ಯವಸ್ಥಿತ ಷಡ್ಯಂತ್ರ ಎಂದು ಆಪಾದಿಸಿದರು.

ಹೊಳಲ್ಕೆರೆ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಶಾಸಕ ಎಂ.ಚಂದ್ರಪ್ಪನವರ ಅಭಿವೃದ್ಧಿ ಪರ ಕೆಲಸಗಳನ್ನು ಸಹಿಸಿಕೊಳ್ಳಲು ಆಗದ ಮಾಜಿ ಸಚಿವ ಹೆಚ್.ಆಂಜನೇಯ ಏನು ಕಿಸಿದಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್‍ನವರು ಶಾಸಕ ಚಂದ್ರಪ್ಪನವರ ವೀಡಿಯೋವನ್ನು ವೈರಲ್ ಮಾಡಿ ಹೇಳಿಕೆಯನ್ನು ಉಲ್ಟಾಪಲ್ಟಾ ಮಾಡಿದ್ದಾರೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಾಲಾಕ್ಷ ಅವರ ಮೇಲಿನ ಸಿಟ್ಟಿಗೆ ಹೊಳಲ್ಕೆರೆಗೆ ಕೋವಿಡ್ ಆಸ್ಪತ್ರೆಯೇ ಬೇಡ ಜನ ಸಾಯಲಿ ಎಂದಿರಬಹುದು. ಇದನ್ನೇ ಲಾಭವಾಗಿ ಮಾಡಿಕೊಳ್ಳುತ್ತಿರುವ ಎಚ್.ಆಂಜನೇಯ ಶಾಸಕ ಎಂ.ಚಂದ್ರಪ್ಪನಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಹೇಳಿರುವುದರಲ್ಲಿ ಅರ್ಥವಿಲ್ಲ.

ಕಳೆದ 20 ವರ್ಷಗಳಿಂದಲೂ ಶಾಸಕರ ಜೊತೆಯಲ್ಲಿದ್ದೇವೆ. ಒಂದು ದಿನವೂ ಒಂದು ಮಾತ್ರೆ ಇಂಜೆಕ್ಷನ್ ತೆಗೆದುಕೊಂಡಿಲ್ಲ. ಅದೇ ಆಂಜನೇಯ ಲಾಟ್‍ಗಟ್ಟಲೆ ಮಾತ್ರೆ ಇಂಜೆಕ್ಷನ್‍ಗಳನ್ನು ಜೊತೆಯಲ್ಲಿಯೇ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ನಿಜವಾಗಿಯೂ ಬುದ್ದಿ ಭ್ರಮಣೆಯಾಗಿರುವುದು ಅವರಿಗೆ ಎನ್ನುವುದನ್ನು ಮೊದಲು ಮನವರಿಕೆ ಮಾಡಿಕೊಂಡು ನಂತರ ಮತ್ತೊಬ್ಬರ ಮೇಲೆ ಆರೋಪ ಹೊರಿಸಲಿ ಎಂದು ಸವಾಲು ಹಾಕಿದರು.

ಶಾಸಕ ಎಂ.ಚಂದ್ರಪ್ಪನವರಿಗೆ ಇನ್ನು ಎರಡುವರೆ ವರ್ಷ ಅಧಿಕಾರವಿದೆ. ಹೊಳಲ್ಕೆರೆ ಕ್ಷೇತ್ರವನ್ನು ಇನ್ನು ಅಭಿವೃದ್ಧಿಪಡಿಸಲಿದ್ದಾರೆ. ಒಂದು ಲಕ್ಷದ ಎಂಟು ಸಾವಿರ ಮತದಾರರು ಮತ ನೀಡಿ ಗೆಲ್ಲಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಆಂಜನೇಯ ಸ್ಪರ್ಧಿಸಿದರೆ ಸೋತು ಸುಣ್ಣವಾಗಿ ಮನೆಗೆ ಹೋಗುವುದು ಗ್ಯಾರೆಂಟಿ. ಮತ್ತೆ ಶಾಸಕ ಎಂ.ಚಂದ್ರಪ್ಪನವರ ಗೆಲುವು ಖಚಿತ.

ಈ ರೀತಿ ಇಲ್ಲ ಸಲ್ಲದ ಅಪವಾದ ಮಾಡುವುದು ಅವರ ಘನತೆಗೆ ತಕ್ಕುದಲ್ಲ. ಈಗಲಾದರೂ ಹುಚ್ಚಾಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡರೆ ಒಳ್ಳೆಯದು. ಕಳೆದ ವರ್ಷವೂ ಕೊರೋನಾ ಸಂಕಷ್ಟದಲ್ಲಿ ಅನೇಕ ಸಂಘ ಸಂಸ್ಥೆಯವರು, ದಾನಿಗಳು ಹೊಳಲ್ಕೆರೆ ಕ್ಷೇತ್ರದ ಬಡವರಿಗೆ ಆಹಾರದ ಕಿಟ್, ಮಾಸ್ಕ್, ಸ್ಯಾನಿಟೈಸರ್‍ಗಳನ್ನು ನೀಡಿ ನೆರವಾಗಿದ್ದಾರೆ. ಇದೇ ಆಂಜನೇಯ ಒಮ್ಮೆಯಾದರೂ ಕ್ಷೇತ್ರದಲ್ಲಿ ಸುತ್ತಾಡಿ ಯಾರ ಕಷ್ಟಗಳನ್ನಾದರೂ ಕೇಳಿದ್ದಾರ ? ಇನ್ನು ಮುಂದಾದರೂ ಇಂತಹ ಖ್ಯಾತೆ ಮಾಡುವುದನ್ನು ಬಿಟ್ಟು ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲಿ ಸೋಂಕಿತರ ನೆರವಿಗೆ ಮುಂದಾಗಲಿ ಎಂದು ಸಲಹೆ ನೀಡಿದರು.

ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಶೋಕ, ಸದಸ್ಯರಾದ ಕೆ.ಸಿ.ರಮೇಶ್, ಮುರುಗೇಶ್, ಬಿಜೆಪಿ.ಮುಖಂಡ ಡಿ.ಸಿ.ಮೋಹನ್ ಹಾಜರಿದ್ದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!