ದಾವಣಗೆರೆ: ಅನಾರೋಗ್ಯದ ಕಾರಣ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರವಿದ್ದ ಕಾರಣ, ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕನಿಷ್ಠ ಮೂರು ದಿನವಾದರೂ ವಿಶ್ರಾಂತಿ ಪಡೆಯಿರಿ ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಈಗಾಗಲೇ ನಿನ್ನೆಯೇ ತಮ್ಮನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎಂದು ರೇಣುಕಾಚಾರ್ಯ ಅವರು ಮನವಿ ಮಾಡಿದ್ದಾರೆ. ಆದರೆ ವೈದ್ಯರು ಆರೋಗ್ಯ ಸುಧಾರಣೆಯ ದೃಷ್ಟಿಯಿಂದ, ಮೂರು ದಿನಗಳಾದರೂ ರೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿಯೇ ಇರುವ ರೇಣುಕಾಚಾರ್ಯ ಅವರು ತಮ್ಮ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದು, ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಒಪ್ಪಿಕೊಂಡಿದ್ದ ಕಾರ್ಯಕ್ರಮಗಳಿಗೆಲ್ಲಾ ಬ್ರೇಕ್ ಬಿದ್ದಿದೆ.
ತಮ್ಮ ಆರೋಗ್ಯದ ಬಗ್ಗೆ ಎಂ ಪಿ ರೇಣುಕಾಚಾರ್ಯ ಅವರೇ ಟ್ವೀಟ್ ಮಾಡಿದ್ದಾರೆ. ಹೊನ್ನಾಳಿ -ನ್ಯಾಮತಿ ಅವಳಿ ತಾಲ್ಲೂಕಿನ ಬಂಧುಗಳು ಪಕ್ಷದ ಕಾರ್ಯಕರ್ತರು, ಮುಖಂಡರುಗಳು, ಮತ್ತು ಅಭಿಮಾನಿಗಳಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಕಳೆದ ಮೂರು ದಿನಗಳಿಂದ ನನ್ನ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರೂ ಸಹ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ಇಂದು ಅನಿವಾರ್ಯ ಪರಿಸ್ಥಿತಿಯ ಕಾರಣ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳುತ್ತಿದ್ದು, ಈ ದಿನದ ನಿಗದಿತ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಲು ಸಾಧ್ಯವಾಗುತ್ತಿಲ್ಲ.
ನನ್ನ ಪರವಾಗಿ ನನ್ನ ಸಹೋದರ ಎಂ.ಪಿ.ಬಸವರಾಜು ಭಾಗಿಯಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಇಂದು ಮಧ್ಯಾಹ್ನದ ನಂತರ ನನ್ನ ದೂರವಾಣಿಯನ್ನು ಸ್ವಿಚ್ ಆಫ್ ಮಾಡಿ ವಿಶ್ರಾಂತಿ ಪಡೆಯಲಿದ್ದು ಯಾರೂ ಕೂಡ ಅನ್ಯತಾ ಭಾವಿಸಬೇಡಿ,ಮುಂದಿನ ದಿನಗಳಲ್ಲಿ ನಾನು ಕೆಲವು ಗ್ರಾಮದ ಮನೆಗಳಿಗೆ ಭೇಟಿ ನೀಡುತ್ತೇನೆ ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೆ ಇರಲೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ….ಇಂತಿ ನಿಮ್ಮ ಮನೆಯ ಮಗ ನಿಮ್ಮ ಸೇವಕ ಎಂ.ಪಿ.ರೇಣುಕಾಚಾರ್ಯ ಎಂದು ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















