ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಸಿಲುಕಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ನಿರೀಕ್ಷಣಾ ಜಾಮೀನನ್ನು ನೀಡಿದೆ. ಮಹರ್ಷಿ ವಾಲ್ಮೀಕಿ ಬಹಕೋಟಿ ಹಗರಣ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸಗ ನೀಡಿದ ಬಳಿಕ ನಾಗೇಂದ್ರ ಅವರು ಬಂಧನದ ಭೀತಿಯಲ್ಲಿದ್ದರು.
ಹೀಗಾಗಿಯೇ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿಯನ್ನ ಸಲ್ಲಿಕೆ ಮಾಡಿದ್ದರು. ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್ ವಾದ – ಪ್ರತಿವಾದವನ್ನ ಆಲಿಸಿ, ಆದೇಶವನ್ನ ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ತೀರ್ಪು ನೀಡಿದೆ. ಪ್ರಕರಣದ ತನಿಖಾಧಿಕಾರಿಯೃ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದರು. ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ, ಇಡಿ ತನಿಖೆ ಮಾಡಿದೆ. ಅದಕ್ಕಿಂತ ಮುಂದುವರೆದು ಇದರಿಂದ ಫಲಾನುಭವಿಗಳು ಯಾರು ಅನ್ನೋದನ್ನ ಪತ್ತೆ ಹಚ್ಚಬೇಕಿದೆ. ಇಲ್ಲಿಯವರೆಗೂ ನಡೆದ ತನಿಖೆಯ ಕೆಲ ಮಾಹಿತಿಗಳನ್ನ ತೆರೆದ ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಿಲ್ಲ. ಈ ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನ ಕಲೆ ಹಾಕಲಾಗಿದೆ ಎಂದು ಹೇಳಿ ಕೋರ್ಟ್‌ಗೆ ತಂದಿದ್ದ ಎರಡು ಸೂಟ್‌ಕೇಸ್ ದಾಖಲೆಗಳನ್ನ ತನಿಖಾಧಿಕಾರಿ ತೋರಿಸಿದರು. ನಾಗೇಂದ್ರ ಪರ ವಕೀಲರು ಕೂಡ ಇದೇ ವೇಳೆ ವಾದ ಮಂಡನೆ ಮಾಡಿದ್ದು, ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ನಡುವಿನ ವ್ಯವಹಾರ ಅವರ ವೈಯಕ್ತಿಕವಾದಂತದ್ದು, ಸಿಬಿಐ ಹೇಳ್ತಾ ಇರುವ ಟೆಂಡರ್ ಗೂ ಈ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ವಾದ ಮಂಡನೆ ಮಾಡಿದರು. ಎರಡು ಕಡೆಯ ವಾದ – ಪ್ರತಿವಾದ ಆಲಿಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ನಾಗೇಂದ್ರ ಅವರು ಕೊಂಚ ನಿರಾಳರಾಗಿದ್ದಾರೆ.

