Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ರಾಜುಗೌಡ ಕಾರು ಅಪಘಾತ..!

---Advertisement---

ಸಿಸಿಎಲ್ ಪಂದ್ಯ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಮಾಜಿ ಸಚುವ ರಾಜುಗೌಡ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ರಾಜು ಗೌಡ ಸೇರಿದಂತೆ ಕಾರಲ್ಲಿ ಇದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಈ ಘಟನೆ ನಡೆದಿರೋದು ಯಾದಗಿರಿ ನಗರದ ಗಂಜ್ ಪ್ರದೇಶದ ಬಳಿ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ.

ಆಂಧ್ರದ ವಿಶಾಖಪಟ್ಟಣದಲ್ಲಿ ಸಿಸಿಎಲ್ ಪಂದ್ಯಾವಳಿ ನಡೆಯುತ್ತಿತ್ತು. ಪಂದ್ಯ ಮುಗಿಸಿ ಮನೆ ಕಡೆಗೆ ವಾಪಾಸ್ ಆಗುತ್ತಿದ್ದರು. ಆದರೆ ಯಾದಗಿರಿಯ ಗಂಜ್ ಪ್ರದೇಶ ಸಮೀಪಿಸುತ್ತಿದ್ದಂತೆ, ರಾಜು ಗೌಡ ಇದ್ದ ಕಾರಿಗೆ ಟ್ರಕ್ ಒಂದು ಬಂದು ಗುದ್ದಿದೆ. ಹಿಂಬದಿಯಿಂದ ಗುದ್ದಿದ ಪರಿಣಾಮ ಚಾಲಕನ ಹಿಡಿತ ತಪ್ಪಿದೆ, ಕಾರು ಅಪಘಾಗಕ್ಕೀಡಾಗಿದೆ. ಇದರ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯಾದಗಿರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ರಿಜಿಸ್ಟರ್ ಆಗಿದೆ.

ಕಾರಿನಲ್ಲಿ ಕುಳಿತಿದ್ದ ರಾಜುಗೌಡ ಅವರಿಗೆ ಸಣ್ಣ ಪುಟ್ಟ ತರಚಿದ ಗಾಯಗಳಾಗಿವೆ. ಈ ಸುದ್ದಿ ತಿಳಿದ ಕೂಡಲೇ ಅವರ ಬೆಂಬಲಿಗರು ಆತಂಕಗೊಂಡಿರುತ್ತಾರೆ. ಇದೇ ಕಾರಣದಿಂದ ರಾಜು ಗೌಡ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರ ಆಶೀರ್ವಾದದಿಂದ ನನಗೆ ಏನೂ ತೊಂದರೆ ಆಗಿಲ್ಲ. ಕೊಡೆಕಲ್ ಬಸವಣ್ಣಪ್ಪನ ಆಶೀರ್ವಾದ, ಕಾರ್ಯಕರ್ತರ ಆಶೀರ್ವಾದ ಇರುವವರೆಗೂ ಏನೂ ಆಗಲ್ಲ. ಎಳ್ಳಷ್ಟು ನನಗೆ ಗಾಯವಾಗಿಲ್ಲ. ಕಾರು ಫೋಟೋ ನೋಡಿ ಸಾಕಷ್ಟು ಜನರು ಆತಂಕಕ್ಕೊಳಗಾಗಿದ್ದರು. ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಆಶೀರ್ವಾದದಿಂದ ನನಗೆ ಏನು ಆಗಿಲ್ಲ ಎಂದಿದ್ದಾರೆ.

ರಾಜುಗೌಡ ಅವರು ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. 2023ರಲ್ಲಿ ಅಸೆಂಬ್ಲಿ ಚುನಾವಣೆ ಹಾಗೂ 2024ರಲ್ಲಿ ನಡೆದ ಸುರಪುರ ಅಸೆಂಬ್ಲಿ ಉಪಚುನಾವಣೆಯಲ್ಲಿ ರಾಜು ಗೌಡ ಸೋಲು ಕಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now