ಬೆಂಗಳೂರು: 2023ರ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಹಾಗೇ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳು ಜಾಸ್ತಿಯಾಗಿದ್ದಾರೆ, ಪಕ್ಷವೂ ಯಾರಿಗೆಲ್ಲಾ ಟಿಕೆಟ್ ಕೊಡಬೇಕು ಎಂಬ ಆಲೋಚನೆಯನ್ನು ಮಾಡಿದೆ. ಇದರ ನಡುವೆ ನಟಿ, ಮಾಜಿ ಸಚಿವೆ ಉಮಾಶ್ರೀ, ಹೈಕಮಾಂಡ್ ಬಳಿ ವಿಶೇಷ ಬೇಡಿಕೆಯೊಂದನ್ನು ಇಟ್ಟಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರಲ್ಲಿ ಮನವಿ ಮಾಡಿರುವ ಉಮಾಶ್ರೀ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಟಿಕೆಟ್ ನೀಡಬೇಕು ಎಂದು ಮನವಿ ಮಾಡುವ ಮೂಲಕ ಕಾಂಗ್ರೆಸ್ ನ ‘ನಾ ನಾಯಕಿ’ ಎಂಬ ಕಾರ್ಯಕ್ರಮದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಾ ನಾಯಕಿ ಕಾರ್ಯಕ್ರಮವನ್ನು ಪ್ರಿಯಾಂಕ ಗಾಂಧಿ ಉದ್ಘಾಟನೆ ಮಾಡಲಿದ್ದಾರೆ.
ಜನವರಿ 16ರಂದು ನಾ ನಾಯಕಿ ಕಾರ್ಯಕ್ರಮ, ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿಯರು ಸೇರಿದಂತೆ ಕಾಂಗ್ರೆಸ್ ಮಹಿಳಾ ನಾಯಕಿಯರು ಸೇರಲಿದ್ದಾರೆ. ಈ ವೇಳೆ ಘಟಕದ ಹಲವು ಬೇಡಿಕೆಗಳನ್ನು ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಬಾರಿ 109 ಮಹಿಳಾ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಪ್ರಿಯಾಂಕ ಗಾಂಧಿ ಅವರ ಬಳಿ ಮನವಿ ಮಾಡಲಿದ್ದಾರೆ.