Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ ; ಸಿದ್ದರಾಮಯ್ಯ ಸೇರಿದಂತೆ ವಿವಿಧ ಮಠಾಧೀಶರು ಭಾಗಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮೇ. 30 : ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (85) ಅವರು ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದು, ಮೃತರ ಅಂತ್ಯಕ್ರಿಯೆಯು ಇಂದು (ಶನಿವಾರ) ಮಧ್ಯಾಹ್ನ 12 ಗಂಟೆಯ ನಂತರ ಅವರ ಸ್ವಗ್ರಾಮವಾದ ಹನುಮಂತನಹಳ್ಳಿಯ ತೋಟದಲ್ಲಿ ಭೋವಿ ಸಮುದಾಯದ ಧಾರ್ಮಿಕ ಸಂಪ್ರದಾಯದಂತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ಪ್ರಕ್ರಿಯೆಗಳು ನಡೆದವು.

ಮಾಜಿ ಸಚಿವ ವೆಂಕಟರಮಣಪ್ಪರವರ ಅಂತ್ಯಸಂಸ್ಕಾರದಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರೊಂದಿಗೆ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಜಗದ್ಗುರು ಕುಂಚಟಿಗ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ವಾಲ್ಮೀಕಿಗುರುಪೀಠದ ಜಗದ್ಗುರು ಶ್ರೀವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು, ಶ್ರೀ ಯಾದವ ಮಹಾಸಂಸ್ಥಾನ (ಗೊಲ್ಲರ) ಗುರುಪೀಠದ ಜಗದ್ಗುರು ಶ್ರೀ ಕೃಷ್ಣಯಾದವ ಮಹಾಸ್ವಾಮಿಗಳು, ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು, ಶ್ರೀ ಕುಂಬಾರ ಗುಂಡಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವ ಕುಂಬಾರಗುಂಡಯ್ಯಾ ಮಹಾಸ್ವಾಮಿಗಳು, ಶ್ರೀ ಹಡಪದಗುರುಪೀಠದ ಜಗದ್ಗುರು ಶ್ರೀ ಅನ್ನಧಾನಿ ಭಾರತೀ ಅಪ್ಪಣ್ಣ ಮಹಾಸ್ವಾಮಿಗಳು, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಹೆಳವ ಗುರುಪೀಠದ ಶ್ರೀ ಬಸವ ಬೃಂಗೇಶ್ವರ ಮಹಾಸ್ವಾಮಿಗಳು ಅಥಣಿಯ ಶಿವಬಸವ ಸ್ವಾಮೀಜಿ ಹಾಗೂ 30ಕ್ಕಿಂತ ಹೆಚ್ಚು ಸ್ವಾಮಿಗಳು ಅಂತಿಮ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now