Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಮಧ್ಯಾಹ್ನ ಸ್ವಗ್ರಾಮ ಹನುಮಂತನಹಳ್ಳಿ ತೋಟದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ

---Advertisement---

ಸುದ್ದಿಒನ್,ತುಮಕೂರು,ಮೇ.30 : ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (85) ಅವರು ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

ಇಂದು ಅಂತ್ಯಕ್ರಿಯೆ:

ಮೃತರ ಅಂತ್ಯಕ್ರಿಯೆಯು ಇಂದು (ಶನಿವಾರ) ಮಧ್ಯಾಹ್ನ 12 ಗಂಟೆಯ ನಂತರ ಅವರ ಸ್ವಗ್ರಾಮವಾದ ಹನುಮಂತನಹಳ್ಳಿಯ ತೋಟದಲ್ಲಿ ನೆರವೇರಲಿದೆ. ಭೋವಿ ಸಮುದಾಯದ ಧಾರ್ಮಿಕ ಸಂಪ್ರದಾಯದಂತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ಪ್ರಕ್ರಿಯೆಗಳು ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವೆಂಕಟರಮಣಪ್ಪ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಒಟ್ಟು 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದ ಅವರು ಜನಪ್ರಿಯ ನಾಯಕರಾಗಿದ್ದರು:

2008: ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ ಸೇವೆ.

2018: ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಣೆ.

ಹಿರಿಯ ನಾಯಕನ ಅಗಲಿಕೆಗೆ ರಾಜಕೀಯ ಗಣ್ಯರು ಹಾಗೂ ಭೋವಿ ಸಮುದಾಯದ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

Join WhatsApp

Join Now

Join Telegram

Join Now