Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮನೆ ಮನೆಗೆ ಅಯೋಧ್ಯೆ ರಾಮಮಂದಿರ ಮಂತ್ರಾಕ್ಷತೆ ಹಂಚುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.01 : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿರುವುದರಿಂದ ಮನೆ ಮನೆಗೆ ರಾಮಮಂದಿರ ಮಂತ್ರಾಕ್ಷತೆ ಹಂಚುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರು ಜೆ.ಸಿ.ಆರ್.ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಸೋಮವಾರ ಚಾಲನೆ ನೀಡಿದರು.

ದೇಶದ ಪ್ರಧಾನಿ ಮೋದಿರವರ ಕರೆಯಂತೆ ಜನವರಿ 22 ರಂದು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ ದೀಪವನ್ನು ಹಚ್ಚುವ ಮೂಲಕ ರಾಮಮಂದಿರ ಉದ್ಗಾಟನೆಗೆ ಭಕ್ತಿ ಸಮರ್ಪಿಸಬೇಕೆಂದು ಜನತೆಯಲ್ಲಿ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ ಮಾಡಿದರು.

ಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಮುರುಗೇಶ್‍ಗೌಡ್ರು, ನಾಗೇಶ್, ಬಿಜೆಪಿ.ನಗರಾಧ್ಯಕ್ಷ ನವೀನ್ ಚಾಲುಕ್ಯ, ನಗರಸಭೆ ಸದಸ್ಯೆ ಶ್ರೀಮತಿ ರೋಹಿಣಿ ಚಾಲುಕ್ಯ, ಸೋಮಶೇಖರ್, ರಮೇಶ್, ಕೃಷ್ಣಪ್ಪ, ಮಲ್ಲಿಕಾರ್ಜುನ್, ಡಾ.ಸಿದ್ದಾರ್ಥಗುಂಡಾರ್ಪಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಿ.ಟಿ.ಸುರೇಶ್ ಸಿದ್ದಾಪುರ, ಭಾರ್ಗವಿ ದ್ರಾವಿಡ್, ಮಯೂರಿ, ಗೀತಾ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ರಾಮ ಮಂದಿರದ ಮಂತ್ರಾಕ್ಷತೆಯನ್ನು ನಗರದ ವಿ.ಪಿ.ಬಡಾವಣೆ ಹಾಗೂ ಜೆಸಿಆರ್.ಬಡಾವಣೆಯಲ್ಲಿ ಸೋಮವಾರ ಮನೆ ಮನೆಗೆ ಹಂಚಲಾಯಿತು.

ಬಿಜೆಪಿ.ಯುವ ಮುಖಂಡ ಭೀಮಸಮುದ್ರದ ಜಿ.ಎಸ್.ಅನಿತ್‍ಕುಮಾರ್ ಈ ವೇಳೆ ಮಾತನಾಡಿ ಜ.22 ರಂದು ಮನೆಗಳ ಮುಂದೆ ಉತ್ತರ ದಿಕ್ಕಿನಲ್ಲಿ ಐದು ದೀಪಗಳನ್ನು ಹಚ್ಚುವ ಮೂಲಕ ರಾಮಮಂದಿರ ಉದ್ಗಾಟನೆಗೆ ಭಕ್ತಿ ಅರ್ಪಿಸಬೇಕೆಂದು ವಿನಂತಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಯುವ ಮುಖಂಡರುಗಳಾದ ಡಾ.ಸಿದ್ದಾರ್ಥ, ಎಂ.ಸಿ.ರಘುಚಂದನ್, ಬಿಜೆಪಿ.ನಗರಾಧ್ಯಕ್ಷ ನವೀನ್ ಚಾಲುಕ್ಯ, ನಗರಸಭೆ ಸದಸ್ಯೆ ಶ್ರೀಮತಿ ರೋಹಿಣಿ ಚಾಲುಕ್ಯ, ಮುರುಗೇಶ್‍ಗೌಡ್ರು, ಭಾರ್ಗವಿ ದ್ರಾವಿಡ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...