ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.01 : ಮಾಜಿ ಸಂಸದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಿದರು.
ಮೈಸೂರು ಪೇಟ, ಶಾಲು, ಬೃಹಧಾಕಾರವಾದ ಹಾರಗಳನ್ನು ಹಾಕಿ ಕಾರ್ಯಕರ್ತರು ಬಿ.ಎನ್.ಚಂದ್ರಪ್ಪನವರಿಗೆ ಹುಟ್ಟುಹಬ್ಬದ ಶುಭ ಕೋರಿದರು. ಇನ್ನು ಕೆಲವರು ಹೂಗುಚ್ಚಗಳನ್ನು ನೀಡಿ ಶುಭ ಹಾರೈಸಿದರು.
ಜನ್ಮದಿನದ ಅಂಗವಾಗಿ ಮಹಿಳೆಯರಿಗೆ ಸೀರೆಗಳನ್ನು ವಿತರಿಸಲಾಯಿತು.
ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಶ್ರೀಮತಿ ರೇಣುಕಾಶಿವು, ಕೆ.ಪಿ.ಸಿ.ಸಿ. ಮಹಿಳಾ ಕಾಂಗ್ರೆಸ್ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಅಧ್ಯಕ್ಷ ಎ.ನಾಗರಾಜ್, ಉಪಾಧ್ಯಕ್ಷ ಶಿವಲಿಂಗಪ್ಪ, ಎಸ್ಸಿ. ವಿಭಾಗದ ಜಿಲ್ಲಾಧ್ಯಕ್ಷ ಜಯಣ್ಣ, ಸೈಯದ್ ಖುದ್ದೂಸ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಭಾಗ್ಯಮ್ಮ ಸೇರಿದಂತೆ ನೂರಾರು ಕಾರ್ಯಕರ್ತರು ಹುಟ್ಟುಹಬ್ಬ ಆಚರಣೆಯಲ್ಲಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






