Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದ ಮಾಜಿ ನಗರಸಭೆ ಅಧ್ಯಕ್ಷ ಕೇಶವಮೂರ್ತಿ ನಿಧನ

---Advertisement---

 

ಚಿತ್ರದುರ್ಗ, (ಮೇ.02) : ನಗರದ ರೈಲ್ವೆ ಸ್ಟೇಷನ್ ಬಳಿಯಿರುವ ಸದಾನಂದಯ್ಯ ಬಡಾವಣೆಯ ನಿವಾಸಿ, ಮಾಜಿ ನಗರಸಭೆ ಅಧ್ಯಕ್ಷ ಕೇಶವಮೂರ್ತಿ(61) ಇಂದು (ಮೇ.02) ರಾತ್ರಿ 9 ಗಂಟೆ ಸುಮಾರಿಗೆ ಅನಾರೋಗ್ಯದಿಂದ ನಿಧನರಾದರು.

ಅವಿವಾಹಿತರಾಗಿದ್ದ ಇವರು 6 ಮಂದಿ ಸಹೋದರ ಮತ್ತು 4 ಮಂದಿ ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಾಳೆ(ಮೇ.03) ಸದಾನಂದಯ್ಯ ಬಡಾವಣೆ ಸಮೀಪವಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

2001 ರಲ್ಲಿ 8 ತಿಂಗಳುಗಳ ಕಾಲ ಚಿತ್ರದುರ್ಗ ನಗರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸಂತಾಪ : ಕೇಶವಮೂರ್ತಿಯವರ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ,  ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರ ಸಮಕಾಲೀನರಾದ ಹೆಚ್.ಜೆ. ಕೃಷ್ಣಮೂರ್ತಿ, ಹೆಚ್. ಮಂಜಪ್ಪ, ಬಿ.ಕಾಂತರಾಜ್, SBL ಮಲ್ಲಿಕಾರ್ಜುನ, ನಗರ ಸಭೆಯ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು, ಹಿರಿಯ ಮುಖಂಡರು ಸೇರಿದಂತೆ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment