ಟೀಂ ಇಂಡಿಯಾದ ಮಾಜಿ ಆಟಗಾರ, ಹಾಸನ ಮೂಲದ ಡೇವಿಡ್ ಜಾನ್ಸನ್ ಆತ್ಮಹತ್ಯೆ..!

 

ಭಾರತದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ 53 ವರ್ಷ ವಯಸ್ಸಾಗಿತ್ತು. ತಾವಿದ್ದ ಮನೆಯ ನಾಲ್ಕನೇ ಫ್ಲೋರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಇನ್ನು ನಿಖರ ಕಾರಣ ತಿಳಿದಿಲ್ಲ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

ಡೇವಿಡ್ ಜಾನ್ಸನ್ ಮೂಲತಃ ಹಾಸನದ ಅರಸೀಕೆರೆಯವರು. ನಮ್ಮ ಕನ್ನಡದವರು ಎಂಬುದೇ ಹೆಮ್ಮೆಯ ವಿಷಯವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬುದೇ ಎಲ್ಲರ ಪ್ರಶ್ನೆಯಾಗಿದೆ‌. ವೇಗದ ಮಧ್ಯದ ಬೌಲರ್ ಆಗಿ ಗುರುತಿಸಿಕೊಂಡವರು. ಕೆಳ ಕ್ರಮಾಂಕದ ಬ್ಯಾಟ್ಸ್ ಮಬ್ ಕೂಡ ಆಗಿದ್ದವರು. 1996ರಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದ ಕೀರ್ತಿ ಇವರದ್ದು. ಜೊತೆಗೆ ಮೂರು ವಿಕೆಟ್ ಗಳನ್ನು ಪಡೆದಿದ್ದಾರೆ.

ಇವರ ಆತ್ಮಹತ್ಯೆ ಕ್ರಿಕೆಟ್ ಪ್ರಿಯರಿಗೆ ಆಘಾತ ತಂದಿದೆ. ಫಿರೋಜ್ ಶಾ ಕೋಟ್ಲಾದಲ್ಲಿ ನಡೆದ ಏಕೈಕ ಟೆಸ್ಟ್ ನಲ್ಲೂ ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಟೆಸ್ಟ್ ಆಡಿದ್ದ ಹೆಗ್ಗಳಿಕೆ ಇವರದ್ದು. ಇವರ ನಿಧನಕ್ಕೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ. ಇವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *