Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಪೊಲೀಸ್ ಮುಖ್ಯಸ್ಥ ಬೆಂಗಳೂರಿನ ಮನೆಯಲ್ಲಿ ಶವವಾಗಿ ಪತ್ತೆ…!

---Advertisement---

ಬೆಂಗಳೂರು: ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ್ ಭಾನುವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಅವರ ಮೃತದೇಹ ಪತ್ತೆಯಾದ ನೆಲದ ಮೇಲೆ ಎಲ್ಲೆಡೆ ರಕ್ತವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅವರು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಕುಟುಂಬ ಸದಸ್ಯರೊಬ್ಬರು ಇದರಲ್ಲಿ ಭಾಗಿಯಾಗಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಅವರ ಹೆಂಡತಿಯೇ ಬರ್ಬರವಾಗಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್​ ಅವರು ಬಿಹಾರ ಮೂಲದವರು. 1981 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿದ್ದರು. ಅವರನ್ನು ಮಾರ್ಚ್ 2015 ರಲ್ಲಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಯಿತು. ಅದಕ್ಕೂ ಮೊದಲು ಅವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಗೃಹರಕ್ಷಕ ದಳದ ಮುಖ್ಯಸ್ಥರಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...