ಬೆಂಗಳೂರು: ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ್ ಭಾನುವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.
ಅವರ ಮೃತದೇಹ ಪತ್ತೆಯಾದ ನೆಲದ ಮೇಲೆ ಎಲ್ಲೆಡೆ ರಕ್ತವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅವರು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಕುಟುಂಬ ಸದಸ್ಯರೊಬ್ಬರು ಇದರಲ್ಲಿ ಭಾಗಿಯಾಗಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಅವರ ಹೆಂಡತಿಯೇ ಬರ್ಬರವಾಗಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರು ಬಿಹಾರ ಮೂಲದವರು. 1981 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿದ್ದರು. ಅವರನ್ನು ಮಾರ್ಚ್ 2015 ರಲ್ಲಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಯಿತು. ಅದಕ್ಕೂ ಮೊದಲು ಅವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಗೃಹರಕ್ಷಕ ದಳದ ಮುಖ್ಯಸ್ಥರಾಗಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















