ಅನಾರೋಗ್ಯದ ಸಮಸ್ಯೆ ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು..!

suddionenews
1 Min Read

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂಬುದು ಮಾಜಿ ಪ್ರಧಾನಿ ದೇವೇಗೌಡ ಅವರ ಆಸೆ. ಅದಕ್ಕಾಗಿ ಪಕ್ಷ ಸಂಘಟನೆ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಹೊಸ ಐಡಿಯಾಗಳನ್ನು ನೀಡುತ್ತಿದ್ದಾರೆ. ನಿನ್ನೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ತಂದೆಯವರ ಕೊನೆ ಆಸೆ ಪಕ್ಷ ಅಧಿಕಾರಕ್ಕೆ ತರುವುದು ಎಂದು.

ಹಿಂಗೆ ಧಣಿವರಿಯದ ನಾಯಕನಂತೆ ಪಕ್ಷಕ್ಕಾಗಿ ಓಡಾಡುವ ದೇವೇಗೌಡ ಆರೋಗ್ಯದಲ್ಲಿ ಇಂದು ಏರುಪೇರಾಗಿದೆ. ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ.

ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡ ಅವರಿಗೆ ಮಂಡಿನೋವಿದ್ದು, ಈ ಹಿನ್ನೆಲೆಯಲ್ಲಿ ಜನರಲ್ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿಯೇ ಮಾಹಿತಿ ಪಡೆಯಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks