ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂಬುದು ಮಾಜಿ ಪ್ರಧಾನಿ ದೇವೇಗೌಡ ಅವರ ಆಸೆ. ಅದಕ್ಕಾಗಿ ಪಕ್ಷ ಸಂಘಟನೆ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಹೊಸ ಐಡಿಯಾಗಳನ್ನು ನೀಡುತ್ತಿದ್ದಾರೆ. ನಿನ್ನೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ತಂದೆಯವರ ಕೊನೆ ಆಸೆ ಪಕ್ಷ ಅಧಿಕಾರಕ್ಕೆ ತರುವುದು ಎಂದಿದ್ದರು.
ಧಣಿವರಿಯದ ನಾಯಕನಂತೆ ಪಕ್ಷಕ್ಕಾಗಿ ಓಡಾಡುವ ದೇವೇಗೌಡ ಆರೋಗ್ಯದಲ್ಲಿ ಇಂದು ಏರುಪೇರಾಗಿದೆ. ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ.
ಅವರಿಗೆ ಮಂಡಿನೋವಿದ್ದು, ಈ ಹಿನ್ನೆಲೆಯಲ್ಲಿ ಜನರಲ್ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












