Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ : ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ!

---Advertisement---

ಬೆಂಗಳೂರು.ಜುಲೈ.18: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಆಸ್ಪತ್ರೆಯ ಐಸಿಯುನಲ್ಲಿ ತಜ್ಞ ವೈದ್ಯರಾದ ಡಾ. ಸತ್ಯನಾರಾಯಣ್ ಮತ್ತು ಡಾ. ಸುನಿಲ್ ಕಾರಂತ್ ಅವರ ನೇತೃತ್ವದ ವಿಶೇಷ ತಂಡವು ಅವರಿಗೆ ನಿರಂತರ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ರಕ್ತದೊತ್ತಡ ಹಾಗೂ ನಾಡಿಮಿಡಿತ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಶುಕ್ರವಾರದಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

Join WhatsApp

Join Now

Join Telegram

Join Now