ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರ ನಿಧನ ಅತ್ಯಂತ ದುಃಖ ತರಿಸಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
2005-06ರಲ್ಲಿ ಶಾಸಕನಾಗಿದ್ದ ವೇಳೆ ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿದ್ದ ವೇಳೆ ಜನ್ಮನೀಡಿದ ತಾಯಿಯಂತೆಯೇ ಪ್ರತಿಯನ್ನು ಧಾರೆಯೆರೆದಿದ್ದಾರೆ.
ಅವರ ಕುಟುಂಬದ ಸದಸ್ಯರೆಲ್ಲರೊಂದಿಗೆ ನನ್ನನ್ನು ಕೂರಿಸಿ ಊಟ ಬಡಿಸಿದ ಪ್ರೀತಿ ಮರೆಯಲಾಗದು. ನನ್ನಷ್ಟೇ ಅಲ್ಲದೆ ಅವರ ಮನೆಗೆ ಭೇಟಿ ನೀಡುತ್ತಿದ್ದ ಎಲ್ಲರನ್ನೂ ತಮ್ಮ ಮಕ್ಕಳೆಂಬ ಭಾವನೆಯಲ್ಲಿಯೇ ನೋಡಿಕೊಳ್ಳುತ್ತಿದ್ದರು. ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರು ರಾಜಕೀಯ ಜೀವನದಲ್ಲಿ ಸಾಧನೆ ಮಾಡಲು ಚನ್ನಮ್ಮ ಅವರ ತ್ಯಾಗ ಬಹಳಷ್ಟು ಇದೆ. ಸದ್ಗುಣ, ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದ ಅವರ ಹೃದಯವಂತಿಕೆ ಸ್ಮರಣೀಯ. ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ದೊರೆಯಲಿ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









