Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ನಿಧನ; ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

---Advertisement---

ಬೆಂಗಳೂರು.ಜುಲೈ.13: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹನುಮಂತಪ್ಪನವರ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಅವರು, ಹಿರಿಯ ನಾಯಕರ ಅಗಲಿಕೆಯಿಂದ ತೀವ್ರ ಆಘಾತವಾಗಿದೆ. ಅವರು ರಾಜ್ಯಸಭಾ ಸದಸ್ಯರಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರದ ಹಲವಾರು ಮಂಡಳಿ ಹಾಗೂ ಆಯೋಗಗಳಲ್ಲಿ ಮಹತ್ವದ ಸೇವೆ ಸಲ್ಲಿಸಿದ್ದರು. ಅಲ್ಲದೆ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿಯೂ ಅವರು ಸಲ್ಲಿಸಿದ ಸೇವೆ ಸ್ಮರಣೀಯ ಎಂದು ನೆನೆದಿದ್ದಾರೆ.

ಹನುಮಂತಪ್ಪನವರ ನಿಧನದಿಂದ ಕಾಂಗ್ರೆಸ್ ಪಕ್ಷ ಒಬ್ಬ ನಿಷ್ಠಾವಂತ ನಾಯಕನನ್ನು ಕಳೆದುಕೊಂಡಿದೆ. ಮಾರ್ಗದರ್ಶಕರಾಗಿ ಇನ್ನಷ್ಟು ಕಾಲ ಅವರು ನಮ್ಮ ನಡುವೆ ಇರಬೇಕಾಗಿತ್ತು. ಮೃತರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.

Join WhatsApp

Join Now

Join Telegram

Join Now