ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಜು.13) : ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರ ಸಹೋದರ ಎಂ.ಶ್ರೀನಿವಾಸ್‍ರವರ ಪತ್ನಿ ಶ್ರೀಮತಿ ಲಲಿತಮ್ಮ(60) ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಚಳ್ಳಕೆರೆ ತಾಲ್ಲೂಕು ದೊಡ್ಡುಳ್ಳಾರ್ತಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಿ ಗೆದ್ದು, 2008 ರಿಂದ 10 ರವರೆಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಚಳ್ಳಕೆರೆ ತಾಲ್ಲೂಕು ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಗುರುವಾರ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂತಾಪ : ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಯುವ ಮುಖಂಡ ರಘುಚಂದನ್, ಜಿ.ಎಸ್.ಅನಿತ್‍ಕುಮಾರ್ ಇನ್ನು ಅನೇಕರು ಲಲಿತಮ್ಮನವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

























