Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಫೆಬ್ರವರಿ  26 ರಂದು ಚಿತ್ರದುರ್ಗ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ

---Advertisement---

ಚಿತ್ರದುರ್ಗ. ಫೆ.23:  ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಇದೇ ಫೆ.26ರಂದು ಬೆಳಿಗ್ಗೆ 10.45ಕ್ಕೆ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೈಸೂರು ವಿಭಾಗದಲ್ಲಿ 12 ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಹಾಗೂ 13 ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ಕಾಮಗಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆ.26ರಂದು ಮಧ್ಯಾಹ್ನ 12.30ಕ್ಕೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು.  ಇದೇ ಸಂದರ್ಭದಲ್ಲಿ ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದ ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಗಣ್ಯರು ನಗರದ ರೈಲ್ವೆ ನಿಲ್ದಾಣದಲ್ಲಿ ಉಪಸ್ಥಿತರಿದ್ದು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸೌತ್ ವೆಸ್ಟರ್ನ್ ರೈಲ್ವೆ ಮೈಸೂರು ವಿಭಾಗದ ಸೀನಿಯರ್ ಡಿವಿಜಿನಲ್ ಕಮರ್ಷಿಯಲ್ ಮ್ಯಾನೇಜರ್ ಜೆ.ಲೋಹಿತೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...