Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ; ಬಿಜೆಪಿ-ಜೆಡಿಎಸ್ ನ ನಾಲ್ವರು ಕಾರ್ಯಕರ್ತರ ಬಂಧನ

---Advertisement---

ಚಿಕ್ಕಬಳ್ಳಾಪುರ : ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ವಿಪಕ್ಷಗಳ ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿ ವಿಕೋಪಕ್ಕೆ ತಿರುಗಿದ್ದು, ಶಾಸಕರ ಮೇಲೆ ಚಪ್ಪಲಿ ಎಸೆದ ಆರೋಪದಡಿ ಬಿಜೆಪಿ ಹಾಗೂ ಜೆಡಿಎಸ್ ನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.

ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಕಾರ್ಯಕ್ರಮ ಶಾಂತಿಯುತವಾಗಿಯೇ ಆರಂಭವಾಗಿತ್ತು. ಆದರೆ ವೇದಿಕೆಗೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಶಾಸಕ ಪ್ರದೀಪ್ ಈಶ್ವರ್ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿ ಗದ್ದಲ ಎಬ್ಬಿಸಿದರು. ಈ ವೇಳೆ ಅಲ್ಲಿದ್ದ ಸ್ವಾಮೀಜಿಯವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರಿಂದ ಕಾರ್ಯಕ್ರಮ ಮುಕ್ತಾಯಗೊಂಡಿತು.

ಕಾರ್ಯಕ್ರಮದ ಬಳಿಕ ನಡೆದ ಮೆರವಣಿಗೆಯಲ್ಲಿ. ಶಾಸಕ ಪ್ರದೀಪ್ ಈಶ್ವರ್ ತಮ್ಮ ಕಾರಿನ ಸನ್ ರೂಫ್ ನಿಂದ ಹೊರಬಂದು ಸಾಗುತ್ತಿದ್ದಾಗ, ವಿಪಕ್ಷಗಳ ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗತೊಡಗಿದರು. ಇದಕ್ಕೆ ಪ್ರತಿಯಾಗಿ ಶಾಸಕರು ಮೀಸೆ ತಿರುವಿ, ತೋಳು ತಟ್ಟಿ ಸವಾಲು ಹಾಕಿದ್ದಾರೆ ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರ ಗುಂಪಿನಿಂದ ಶಾಸಕರತ್ತ ಚಪ್ಪಲಿ ತೂರಿಬಂತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್ಐ ಅಮರ್ ಅವರು ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದ ಪೊಲೀಸರು ನಾಲ್ವರನ್ನು ತಕ್ಷಣವೇ ಬಂಧಿಸಿದ್ದಾರೆ. ಸದ್ಯ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಪೊಲೀಸ್ ಠಾಣೆಯ ಸುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

Join WhatsApp

Join Now

Join Telegram

Join Now